ಸುರಂಗ ಕುಸಿತ: 17 ದಿನಗಳ ರಕ್ಷಣಾ ಕಾರ್ಯಾಚರಣೆ ಯಶಸ್ವಿ -ಹೊರಬಂದ 9 ಕಾರ್ಮಿಕರು
ಉತ್ತರ ಕಾಶಿ: ಉತ್ತರಕಾಶಿಯಲ್ಲಿ ಸಿಲ್ಕ್ಯಾರ ಟನಲ್ ನಲ್ಲಿ ಸಿಲುಕಿದ್ದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಬಹುತೇಕ ಯಶಸ್ಸಿನತ್ತ ಸಾಗಿದ್ದು ಈ ವರೆಗೂ ಒಟ್ಟು 9 ಕಾರ್ಮಿಕರನ್ನು ಟನಲ್ ನಿಂದ ಸುರಕ್ಷಿತವಾಗಿ ಹೊರಕ್ಕೆ ಕರೆತರಲಾಗಿದೆ.
ಈ ಮೂಲಕ 17 ದಿನಗಳ ಕಾಲ ನಡೆದಿದ್ದ ರಕ್ಷಣಾ ಕಾರ್ಯಾಚರಣೆ ಪ್ರಕ್ರಿಯೆ ಯಶಸ್ವಿಯಾಗಿದೆ. ಪೈಪ್ ಮೂಲಕ 9 ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ.
41 ಕಾರ್ಮಿಕರನ್ನು ಒಬ್ಬೊಬ್ಬರಾಗಿ ಹೊರ ಕರೆತರಲಾಗುತ್ತಿದೆ. ಕಾರ್ಮಿಕರನ್ನು ಹೊರ ಕರೆತರುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯಲು 41 ಆಂಬ್ಯುಲೆನ್ಸ್‌ಗಳನ್ನು ಸಜ್ಜಾಗಿ ಇರಿಸಲಾಗಿತ್ತು.
ಸಮುದಾಯ ಆರೋಗ್ಯ ಕೇಂದ್ರ ಚಿನ್ಯಾಲಿಸೌರ್‌ನಲ್ಲಿ 41 ಕಾರ್ಮಿಕರ ಚಿಕಿತ್ಸೆಗಾಗಿ ಸಿದ್ಧತೆ ಮಾಡಲಾಗಿದ್ದು, ಎಲ್ಲರನ್ನೂ ಇಲ್ಲಿಗೆ ಕರೆತಂದು ಆರೋಗ್ಯ ಪರಿಶೀಲನೆ ನಡೆಸಲಾಗುತ್ತದೆ.
ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು 41 ಕಾರ್ಮಿಕರು ಬರೋಬ್ಬರಿ 17 ದಿನಗಳಿಂದ ಸುರಂಗದೊಳಗೆ ಸಿಲುಕಿದ್ದರು.