ಮುದ್ರಾಡಿ ನಮ ತುಳುವೆರ್ ಕಲಾ ಸಂಘಟನೆಯಿಂದ ಐವರಿಗೆ ಸುವರ್ಣ ಕರ್ನಾಟಕ ಪ್ರಶಸ್ತಿ
ಹೆಬ್ರಿ: ಮುದ್ರಾಡಿ ನಮತುಳುವೆರ್ ಕಲಾ ಸಂಘಟನೆಯಿಂದ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಸುವರ್ಣ ಕರ್ನಾಟಕ ಕಾರ್ಯಕ್ರಮದ ಪ್ರಯುಕ್ತ ನೀಡುವ ಸುವರ್ಣ ಕರ್ನಾಟಕ ಪ್ರಶಸ್ತಿಯನ್ನು ಶಂಕರಪುರ ದ್ವಾರಕಾಮಯಿ ಮಠದ ಸಾಯಿ ಈಶ್ವರ್ ಗುರೂಜಿ, ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೋಕ್ತೇಸರ ಧನಂಜಯ ಶೆಟ್ಟಿ, ಮುನಿಯಾಲು ಗೋಧಾಮದ ಸಂಸ್ಥಾಪಕ ಡಾ.ಜಿ.ರಾಮಕೃಷ್ಣ ಆಚಾರ್, ಅರಸಮ್ಮಕಾನು ಶ್ರೀನಾಗಕನ್ನಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೋಕಸ್ತೇರ ಚಂದ್ರಶೇಖರ ಶೆಟ್ಟಿ ಮತ್ತು ಧಾರ್ಮಿಕ ಮುಂದಾಳು ಹೆಬ್ರಿ ಭಾಸ್ಕರ ಜೋಯಿಸ್ ಅವರಿಗೆ ನೀಡಲಾಗುತ್ತದೆ ಎಂದು ಮುದ್ರಾಡಿ ನಮತುಳುವೆರ್ ಕಲಾ ಸಂಘಟನೆಯ ಅಧ್ಯಕ್ಷ ಸುಕುಮಾರ್ ಮೋಹನ್ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸುವರ್ಣ ಕರ್ನಾಟಕ ರಂಗ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಬೆಳಗಾವಿಯ ರಂಗನಿರ್ದೇಶಕ ಶ್ರೀಪತಿ ಮಂಜನಬೈಲು ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆ ವಹಿಸುವರು. ಉಡುಪಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಶಾಂತ್ ಕುಮಾರ್ ಶೆಟ್ಟಿ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ವಾಸ್ತುತಜ್ಞ ಕಾರ್ಕಳದ ಪ್ರಮಲ್ ಕುಮಾರ್ ಭಾಗವಹಿಸುವರು.