ಚುನಾವಣಾ ಫಲಿತಾಂಶ: 3 ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ಭೇರಿಯತ್ತ, ತೆಲಂಗಾಣ ಕಾಂಗ್ರೆಸ್‌ಗೆ ಜೈ ಎಂದ ಮತದಾರ

ಹೈದರಾಬಾದ್: 2024ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿದ್ದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಪೈಕಿ 4 ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಮತ್ತು 1 ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆಯಲ್ಲಿದೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸ್ಪಷ್ಟ ಬಹುಮತದತ್ತ ಮುನ್ನುಗ್ಗಿದೆ ಬಿಜೆಪಿ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದತ್ತ ಸಾಗಿದ್ದು, ಸರಕಾರ ರಚನೆ ಮಾಡುವುದು ಬಹುತೇಕ ಖಚಿತವಾಗಿದೆ . ಮಧ್ಯ ಪ್ರದೇಶದ ಒಟ್ಟು 230 ಕ್ಷೇತ್ರಗಳ ಪೈಕಿ ಬಿಜೆಪಿ 144 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಕೇವಲ 83 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಇಲ್ಲಿ ಮ್ಯಾಜಿಕ್ ನಂಬರ್ 116 ಆಗಿದ್ದು ಈಗಾಗಲೇ ಬಿಜೆಪಿ 144 ಸ್ಥಾನಗಳ ಮುನ್ನಡೆಯಲ್ಲಿದ್ದು, ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದೆ.

ರಾಜಸ್ಥಾನದಲ್ಲಿ ಬಿಜೆಪಿ ನಾಗಾಲೋಟ
ಅತ್ತ ರಾಜಸ್ಥಾನದಲ್ಲೂ 199 ಕ್ಷೇತ್ರಗಳ ಪೈಕಿ ಬಿಜೆಪಿ 116 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಕೇವಲ 67 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ 100 ಮ್ಯಾಜಿಕ್ ನಂಬರ್ ಆಗಿದ್ದು, ಹೀಗಾಗಿ ಇಲ್ಲಿಯೂ ಬಿಜೆಪಿ ಅಧಿಕಾರ ರಚನೆಯತ್ತ ಸಾಗಿದೆ.

ಛತ್ತೀಸ್ ಘಡದಲ್ಲಿ ಕಾಂಗ್ರೆಸ್-ಬಿಜೆಪಿ ತೀವ್ರ ಪೈಪೋಟಿ
ಇತ್ತ ಛತ್ತೀಸ್ ಘಡದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಛತ್ತೀಸ್ ಗಢದ ಒಟ್ಟು 90 ಕ್ಷೇತ್ರಗಳ ಪೈಕಿ ಬಿಜೆಪಿ 49 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 39 ಮತ್ತು ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇಲ್ಲಿ ಇನ್ನೂ ಹಲವು ಸುತ್ತಿನ ಮತ ಎಣಿಕೆ ಬಾಕಿ ಇದ್ದು, ಹೀಗಾಗಿ ಇಲ್ಲಿ ಮತ್ತೆ ಕಾಂಗ್ರೆಸ್ ಬಿಜೆಪಿಗೆ ಪೈಪೋಟಿ ನೀಡುವ ಸಾಧ್ಯತೆ ಇದು ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ ಲಭಿಸಿರುವ ಟ್ರೆಂಡ್ ಗಳ ಪ್ರಕಾರ ಛತ್ತೀಸ್ ಗಢದಲ್ಲೂ ಬಿಜೆಪಿ ಸರ್ಕಾರ ರಚಿಸುವತ್ತ ದಾಪುಗಾರಿಸಿದ್ದು, ಇಲ್ಲಿ ಸರ್ಕಾರ ರಚನೆಗೆ 46 ಸ್ಥಾನಗಳ ಅಗತ್ಯವಿದೆ. ಆದರೆ ಬಿಜೆಪಿ 49 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಹೀಗಾಗಿ ಇಲ್ಲಿಯೂ ಬಿಜೆಪಿ ಸರ್ಕಾರ ರಚಿಸುವತ್ತ ದಾಪುಗಾಲಿರಿಸಿದೆ. ಆದರೂ ಇಲ್ಲಿ ಹಲವು ಹಂತಗಳ ಮತ ಎಣಿಕೆ ಕಾರ್ಯ ಬಾಕಿ ಇರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಇನ್ನೂ ಅವಕಾಶ ಇದೆ ಎಂದು ಹೇಳಲಾಗುತ್ತಿದೆ.

ಕೈ ಹಿಡಿದ ಗ್ಯಾರಂಟಿ- ತೆಲಂಗಾಣ ಕಾಂಗ್ರೆಸ್ ತೆಕ್ಕೆಗೆ
ಇತ್ತ ತೆಲಂಗಾಣದಲ್ಲಿ ಸಿಎಂ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್ ಎಸ್ ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು ತೆಲಂಗಾಣದ ಒಟ್ಟು 119 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅಭೂತಪೂರ್ವ ಸಾಧನೆ ಮಾಡಿದೆ. ಆಡಳಿತಾರೂಢ ಬಿಆರ್ಎಸ್ ಕೇವಲ 45 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು ಎಐಎಂಐಎಂ 4 ಮತ್ತು ಬಿಜೆಪಿ 3ರಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಅಧಿಕಾರ ರಚನೆಗೆ ಇಲ್ಲಿ 60 ಕ್ಷೇತ್ರಗಳ ಅಗತ್ಯತೆ ಇದ್ದು, ಕಾಂಗ್ರೆಸ್ ಸ್ಪಷ್ಟವಾಗಿ ಅಧಿಕಾರ ರಚನೆಯತ್ತ ದಾಪುಗಾಲಿರಿಸಿದೆ.

ರಾಜಸ್ಥಾನ

ಬಿಜೆಪಿ11200112
ಕಾಂಗ್ರೆಸ್7200072
ಬಿಎಸ್‏ಪಿ0200002
ಇತರರು1300

ಮಧ್ಯಪ್ರದೇಶ

ಬಿಜೆಪಿ16100161
ಕಾಂಗ್ರೆಸ್6600066
ಬಿಎಸ್‏ಪಿ0200002
ಇತರರು0100001

ತೆಲಂಗಾಣ
ಕಾಂಗ್ರೆಸ್+6400064
ಬಿಆರ್‏ಎಸ್4100041
ಬಿಜೆಪಿ+0800008
ಎಐಎಂಐಎಂ0600006

ಛತ್ತೀಸ್‌ಗಡ್
ಬಿಜೆಪಿ5500055
ಕಾಂಗ್ರೆಸ್+3200032
ಬಿಎಸ್‏ಪಿ+0200002
ಇತರರು0100001

Leave a Reply

Your email address will not be published. Required fields are marked *

error: Content is protected !!