ಮುಂದಿನ ಚುನಾವಣೆಯಲ್ಲಿ ಮೋದಿಯನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ- ಶೋಭಾ ಕರಂದ್ಲಾಜೆ
ಹೊಸದಿಲ್ಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಡದಲ್ಲಿ ಬಿಜೆಪಿ ಜಯ ಸಾಧಿಸಿದ್ದು, ಉತ್ತರ ಭಾರತದ ಜನತೆ ನರೇಂದ್ರ ಮೋದಿ ಕೈಬಲಪಡಿಸಿದ್ದಾರೆ ಎಂದು ಬಿಜೆಪಿ ಗೆಲುವಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹರ್ಷ ವ್ಯಕ್ತಪಡಿಸಿದರು.
ಹೊಸದಿಲ್ಲಿಯಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ಬಿಜೆಪಿ ಜಯ ಸಾಧಿಸಿದ್ದು, ಉತ್ತರ ಭಾರತದ ಜನತೆ ನರೇಂದ್ರ ಮೋದಿ ಬೆಂಬಲಿಸಿದ್ದಾರೆ. ಅಲ್ಲದೇ 2024ರಲ್ಲಿ ನರೇಂದ್ರ ಮೋದಿಯನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗ್ತಾರೆ. ನರೇಂದ್ರ ಮೋದಿಯವರ ನಾಯಕತ್ವಕ್ಕೆ ಜನಬೆಂಬಲ ಸಿಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಬಿಜೆಪಿಯನ್ನು ಬಲಪಡಿಸಬೇಕಿದೆ” ಎಂದರು.