ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ವಕೀಲರ ಪ್ರತಿಭಟನೆ
ಮಂಗಳೂರು, ಡಿ.4: ಚಿಕ್ಕಮಗಳೂರಿನಲ್ಲಿ ವಕೀಲ ಪ್ರೀತಂ ಎಂಬವರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಖಂಡಿಸಿ ಇಂದು ಮಂಗಳೂರಿನಲ್ಲಿ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಕೀಲರು ದೌರ್ಜನ್ಯ ನಡೆಸಿದ ಪೊಲೀಸರ ಮೇಲೆ ಕ್ರಮ ಕೈಗೊಳ್ಳಬೇಕು. ಇಲಾಖಾ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ, ಉಪಾಧ್ಯಕ್ಷ ಮನೋರಾಜ್ ರಾಜೀವ್, ಕಾರ್ಯದರ್ಶಿ ಶ್ರೀಧರ ಎಣ್ಮಕಜೆ ಈ ಸಂದರ್ಭದಲ್ಲಿ ಮಾತನಾಡಿದರು.
ಹಿರಿಯ ವಕೀಲರಾದ ಶಂಭು ಶರ್ಮ, ನರಸಿಂಹ ಹೆಗ್ಡೆ, ಟಿ.ನಾರಾಯಣ ಪೂಜಾರಿ, ಎಂ.ಆರ್.ಬಳ್ಳಾಲ್, ಸುಬ್ಬಯ ರೈ ಮತ್ತಿತರರು ಪಾಲ್ಗೊಂಡಿದ್ದರು.