PSI ನೇಮಕಾತಿ ಮರು ಪರೀಕ್ಷೆ ಜನವರಿ 23ಕ್ಕೆ ಮುಂದೂಡಿಕೆ: ಗೃಹ ಸಚಿವ ಪರಮೇಶ್ವರ್ ಘೋಷಣೆ
ಬೆಳಗಾವಿ: ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದ್ದು, ಮುಂದಿನ ವರ್ಷ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ.
545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು. ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇದೇ ಡಿಸೆಂಬರ್ 23ಕ್ಕೆ ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿತ್ತು. ಆದರೆ ಹಲವು ಅಭ್ಯರ್ಥಿಗಳು ಮತ್ತು ಪ್ರತಿಪಕ್ಷ ಬಿಜೆಪಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದವು.