ಕುಂದಾಪುರ: ಮೀನು ವ್ಯಾಪಾರಿ ಅಂಗಡಿಯಲ್ಲಿ ಆತ್ಮಹತ್ಯೆ
ಕುಂದಾಪುರ, ಡಿ.4: ಸಾಲಬಾಧೆಯಿಂದ ಮೀನು ವ್ಯಾಪಾರಸ್ಥರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.3ರಂದು ಬೀಜಾಡಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕೋಟತಟ್ಟು ನಿವಾಸಿ ಉದಯ (47) ಎಂದು ಗುರುತಿಸಲಾಗಿದೆ. ಇವರು ಬೀಜಾಡಿ ಗ್ರಾಮದ ಕಟ್ಟಡದಲ್ಲಿ ಮೀನು ಅಂಗಡಿ ಇಟ್ಟುಕೊಂಡು ವ್ಯವಹಾರ ಮಾಡಿಕೊಂಡಿದ್ದು, ಸಾಲಬಾಧೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಅಂಗಡಿಯ ಒಳಗಡೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.