ಉಡುಪಿ: ಯುವತಿ ನಾಪತ್ತೆ

ಉಡುಪಿ, ಡಿ.05: ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಸಿ.ಟಿ ಬಸ್ ನಿಲ್ದಾಣದ ಬಳಿ ಇರುವ ಪಿ.ಜಿ.ಯಲ್ಲಿ ವಾಸವಿದ್ದ ಅರ್ಚನಾ (19) ಎಂಬ ಯುವತಿಯು ನವೆಂಬರ್ 4 ರಿಂದ ಕಾಣೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!