ಸಿಎಂರಿಂದ ತುಷ್ಟೀಕರಣದ ರಾಜಕಾರಣ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿಗಳು ನಿನ್ನೆ ಸಭೆಯೊಂದರಲ್ಲಿ ರಾಷ್ಟ್ರ ಸಂಪತ್ತಿನಲ್ಲಿ ಅಲ್ಪ ಸಂಖ್ಯಾ ತರಿಗೆ ವಿಶೇಷವಾಗಿರುವ ಹಕ್ಕು ಕೊಡುವ ಮಾತನಾಡಿದ್ದಾರೆ. ಇದು ತುಷ್ಟೀಕರಣದ ರಾಜಕಾರಣ ಮತ ಬ್ಯಾಂಕಿನ ರಾಜಕಾರಣ ಮತ್ತು ಮುಖ್ಯಮಂತ್ರಿ ಯಾಗಿ ಎಲ್ಲರಿಗೂ ನ್ಯಾಯ ಕೊಡುವ ಅವರ ಕರ್ತವ್ಯವನ್ನು ಮರೆತಂತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಈಗಾಗಲೇ ಅಲ್ಪಸಂಖ್ಯಾತರಿಗೆ ವಕ್ಪ್ ಬೊರ್ಡ್ ಮೈನಾರಿಟಿ ಕಾರ್ಪೊರೆಷನ್, ಮೈನಾರಿಟಿ ಕಮಿಷನ್ ನಿಂದ ಹಲವಾರು ಕಾರ್ಯಕ್ರಮಗಳ ಮೂಲಕ ಅನುದಾನ ಬರುತ್ತಿದೆ ಅವರೂ ಕೂಡ ಶಿಕ್ಷಣವನ್ನು ಪಡೆದು ಸ್ವಾವಲಂಬಿ ಆಗಬೇಕೆಂಬ ಆಸೆ ಎಲ್ಲ ಸರ್ಕಾರಗಳ ಉದ್ದೇಶವಾಗಿದೆ. ಆದರೆ, ಇತರ ಎಲ್ಲ ಸಮುದಾಯ ಗಳ ಮೇಲೆ ಸವಾರಿ ಮಾಡುವ ರೀತಿ ಮುಖ್ಯ ಮಂತ್ರಿಯ ಮಾತು ಖಂಡನೀಯ ಎಂದು ಹೇಳಿದ್ದಾರೆ.
ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟಿರುವ ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಗಳಿಗೆ ವರ್ಗಾವಣೆ ಮಾಡಿ, ಅವರಿಗೆ ಅನ್ಯಾಯ ಮಾಡಿದ್ದೀರಿ, ಬರ ಪರಿಹಾರಕ್ಕೆ ಹಣ ನೀಡದೇ ಮುಸ್ಲೀಮರ ಓಲೈಕೆಗಾಗಿ ಹೆಚ್ಚಿನ ಅನುದಾನ ನೀಡುವುದಾಗಿ ಹೇಳುತ್ತೀರಿ, ಇದರಿಂದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗುವುದಲ್ಲದೇ, ಸಾಮಾಜಿಕವಾಗಿ ತಾರತಮ್ಯ ಮಾಡಿದಂತಾಗುತ್ತದೆ ಎಂದು ಹೇಳಿದ್ದಾರೆ.