ಉಡುಪಿ: ಜಿಲ್ಲೆಯಲ್ಲಿ ತೀವ್ರಗೊಂಡ ಮರಳಿನ ಸಮಸ್ಯೆ ಗುರುಪ್ರಸಾದ್ ಶೆಟ್ಟಿ ರಾಜೀನಾಮೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ತಲೆದೋರಿರುವ ಮರಳಿನ ಸಮಸ್ಯೆಗೆ ಪರಿಹಾರ ಕಾಣದೆ ಜಿಲ್ಲೆಯ ಸಾವಿರಾರು ಬಡ ಜನತೆಯ ನಿರ್ಮಾಣ ಹಂತದಲ್ಲಿರುವ ಮನೆಗಳು ಅತಂತ್ರ ಸ್ಥಿತಿಯಲ್ಲಿ ಸ್ಥಗಿತಗೊಂಡಿದೆ. ಇದರ ಜೊತೆಗೆ ಕಟ್ಟಡದ ನಿರ್ಮಾಣ ಕ್ಷೇತ್ರದಲ್ಲಿಯೂ ವಿಪರೀತ ತೊಂದರೆ ಉಂಟಾಗಿದೆ. ಸಾಮಾನ್ಯ ಜನರ ನಿತ್ಯ ಭವಣೆ ಅರಣ್ಯರೋಧನವಾಗಿದೆ. ಸಾರ್ವಜನಿಕರು, ವಿವಿಧ ಸಂಘಟನೆಗಳು ಹಾಗೂ ಕಾರ್ಮಿಕರು ಹಲವಾರು ಮನವಿಗಳನ್ನು ನೀಡಿದರೂ, ಮುಷ್ಕರಗಳನ್ನು ನಡೆಸಿದರೂ ಸರಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯ ಜನತೆಯ ಮರಳಿನ ಬೇಡಿಕೆಯನ್ನು ಪೂರೈಸುವಲ್ಲಿ ವಿಫಲವಾಗಿರುವ ಕಾರಣ ಉಡುಪಿ ಜಿಲ್ಲೆಯ 7 ಸದಸ್ಯರ ಮರಳು ಸಮಿತಿ (ಸಿ.ಆರ್.ಝಡ್) ಸದಸ್ಯತನಕ್ಕೆ ತಾನು ಈ ಮೂಲಕ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!