ಉಡುಪಿ: ಹಾಸ್ಟೆಲ್ ವಾರ್ಡನ್ ನಾಪತ್ತೆ

ಉಡುಪಿ, ಡಿ.9: ಉಡುಪಿಯ ರೆಸಿಡೆನ್ಸಿಯಲ್ ಸ್ಕೂಲ್ ಒಂದರ ಹಾಸ್ಟೆಲ್ ವಾರ್ಡನ್ ಗುಣಕರ (32) ಎಂಬವರು ಡಿಸೆಂಬರ್ 6ರಂದು ಹಾಸ್ಟೆಲ್‌ನಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಉದ್ದ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!