ಕಾರ್ಕಳ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಸದಾಶಿವ ದೇವಾಡಿಗ ಆಯ್ಕೆ
ಕಾರ್ಕಳ ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷರಾಗಿದ್ದ ನ್ಯಾಯವಾದಿ ಶೇಖರ್ ಮಡಿವಾಳ ಅವರು ವೈಯಕ್ತಿಕ ಕಾರಣಗಳಿಂದ ತನ್ನ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದರಿಂದ ಸದ್ರಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಸದಾಶಿವ ದೇವಾಡಿಗ ಇವರು ಆಯ್ಕೆಯಾಗಿದ್ದಾರೆ.
ನ್ಯೂ ಇಂಡಿಯಾ ಇನ್ಶುರೆನ್ಸ್ ಕಂಪನಿಯಲ್ಲಿ ಸೀನಿಯರ್ ಬ್ರಾಂಚ್ ಮೇನೆಜರ್ ಆಗಿ ನಿವೃತ್ತಿಗೊಂಡಿದ್ದು ಇದೀಗ ಕ್ಷೇತ್ರದ ಜನರ ಅಭಿಪ್ರಾಯದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿಯವರ ಶಿಫಾರಸಿನ ಮೇರೆಗೆ ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ರವರು, ಸದಾಶಿವ ದೇವಾಡಿಗ ಅವರನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುತ್ತಾರೆ.
ಆದೇಶ ಪತ್ರವನ್ನು ಸ್ವೀಕರಿಸುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಧಾಕರ ಕೋಟ್ಯಾನ್, ಹೆಬ್ರಿ ಬ್ಲಾಕ್ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಕಾಂಗ್ರೆಸ್ ನಾಯಕ ಕೃಷ್ಣಮೂರ್ತಿ, ಕಾರ್ಕಳ ಬ್ಲಾಕ್ ವಕ್ತಾರರಾದ ಬಿಪಿನ್ ಚಂದ್ರಪಾಲ್ ನಕ್ರೆ, ಕೆಪಿಸಿಸಿ ಕಿಸಾನ್ ಘಟಕದ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಕೆಪಿಸಿಸಿ ಯುವ ಕಾಂಗ್ರೆಸ್ ಕಾರ್ಯದರ್ಶಿ ರವಿಶಂಕರ್ ಸೆರ್ವೇಗಾರ್, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬಂಗೇರಾ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಸ್ಲಾಮ್, ಐಟಿ ಸೆಲ್ ಅಧ್ಯಕ್ಷ ಸತೀಶ್ ಕಾರ್ಕಳ, ಸೇವಾದಳದ ಅಧ್ಯಕ್ಷ ಸುಶಾಂತ್, ಐಟಿ ಸೆಲ್ನ ಪ್ರದೀಪ್ ಮುದ್ರಾಡಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.