ಪುತ್ತಿಗೆ ಪರ್ಯಾಯ ಸ್ವಾಗತ ಸಮಿತಿ ಧರ್ಮಸ್ಥಳ ಭೇಟಿ


ಉಡುಪಿ: ಜನವರಿಯಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯೋತ್ಸವ ಸ್ವಾಗತ ಸಮಿತಿಯು, ಸ್ವಾಗತ ಸಮಿತಿಯ ಗೌರವ ಅಧ್ಯಕ್ಷರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಪರ್ಯಾಯಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ವಿನಂತಿಸಲಾಯಿತು.

ಶ್ರೀ ಹೆಗ್ಗಡೆಯವರು ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿ ಪುತ್ತಿಗೆ ಶ್ರೀಗಳ ಪರ್ಯಾಯವನ್ನು ಬಹಳ ವೈಭವದಿಂದ ನಡೆಸಿಕೊಡುವರು ಎಂದು ಆಶೀರ್ವಚಿಸಿದ್ದಲ್ಲದೆ, ಕ್ಷೇತ್ರದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಪರವಾಗಿ ಶ್ರೀ ಮಠದ ದೀವಾನರದ ನಾಗರಾಜ ಆಚಾರ್ಯ, ಅಧ್ಯಕ್ಷ ಎಚ್.ಎಸ್.ಬಲ್ಲಾಳ್, ಕಾರ್ಯಾಧ್ಯಕ್ಷ ರಘುಪತಿ ಭಟ್, ಪ್ರಧಾನ ಕಾರ್ಯದರ್ಶಿ ಬೆಳಪು ದೇವಿಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ರಂಜನ್ ಕಲ್ಕೂರ, ಸಂಚಾಲಕರಾದ ಸಂತೋಷ್ ಶೆಟ್ಟಿ ತೆಂಕರಗುತ್ತು,, ರಮೇಶ್ ಭಟ್ ಕೆ, ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಹಾಗೂ ರಾಜೇಶ್ ಉಪ್ಪೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!