ಮಂಗಳೂರು: ನರ್ಸಿಂಗ್ ವಿದ್ಯಾರ್ಥಿ ನೇಣಿಗೆ ಶರಣು

ಮಂಗಳೂರು: ಕಾಲೇಜಿನ ಹಾಸ್ಟೆಲ್ ನಲ್ಲೇ ನರ್ಸಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಕೇರಳದ ಅಲೆಪ್ಪಿ ನಿವಾಸಿಯಾದ ಸಚಿನ್ ಸಜು (19 ವರ್ಷ) ಎಂದು ಪೊಲೀಸರು ತಿಳಿಸಿದ್ದಾರೆ ಕಮಲ.

ಸಚಿನ್ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಯಾಗಿದ್ದು ಕಳೆದ ತಿಂಗಳಷ್ಟೇ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದ ಎನ್ನಲಾಗಿದೆ. ಎರಡು ದಿನಗಳಿಂದ ಆರೋಗ್ಯ ಸಮಸ್ಯೆಯಿಂದಾಗಿ ತರಗತಿಗೆ ಹಾಜರಾಗಿರಲಿಲ್ಲ ಆದರೆ ಡಿ.8 ರಂದು ಹಾಸ್ಟೆಲ್ ರೂಮ್ ನಲ್ಲಿ ಯಾರು ಇಲ್ಲದ ವೇಳೆ ಬೆಡ್‌ಶೀಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಘಟನೆ ಸಂಬಂಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್: 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.

Leave a Reply

Your email address will not be published. Required fields are marked *

error: Content is protected !!