ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದತಿ ತೀರ್ಮಾನ ಎತ್ತಿ ಹಿಡಿದ ಸುಪ್ರೀಂ ತೀರ್ಪು ಸ್ವಾಗತಾರ್ಹ: ದಾವೂದ್ ಅಬೂಬಕ್ಕರ್

ಉಡುಪಿ: ಭಾರತದ ಅವಿಭಾಜ್ಯ ಅಂಗ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ ಅಲ್ಲಿನ ನಾಗರಿಕರು ಯಾವುದೇ ಜೀವ ಭಯ ಇಲ್ಲದೆ ಬದುಕುವಂತೆ ಮಾಡಿದ್ದ 370ನೇ ವಿಧಿ ರದ್ದತಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡಿರುವ ಐತಿಹಾಸಿಕ ನಿರ್ಣಯವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವುದನ್ನು ಉಡುಪಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ದಾವೂದ್ ಅಬೂಬಕ್ಕರ್ ಸ್ವಾಗತಿಸಿದ್ದಾರೆ.

ಸುಪ್ರೀಂ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ. ನ್ಯಾಯ ಸಮ್ಮತ ತೀರ್ಪಿನಿಂದ ದೇಶದ ಏಕತೆ ಮತ್ತು ಅಖಂಡತೆಗೆ ಸವಾಲು ಒಡ್ಡಿದ್ದ ವಿಭಜನಕಾರಿ ಕಾಂಗ್ರೆಸ್ಸಿಗೆ ತಾನು ಮಾಡಿದ ತುಷ್ಠಿಕರಣ ನೀತಿ ಈಗ ಮಗ್ಗುಲ ಮುಳ್ಳಾಗಿದೆ ಎಂದು ಅಬೂಬಕ್ಕರ್ ತಿಳಿಸಿದ್ದಾರೆ.

ದೇಶ ವಿಭಜನೆಯ ಕರಾಳ ಇತಿಹಾಸ ಸೃಷ್ಟಿಸಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದರೆ ಪುನಃ 370ನೇ ವಿಧಿಯನ್ನು ಜಾರಿಗೆ ತರುತ್ತೇವೆ ಎನ್ನುತ್ತಿರುವುದು ಕಾಂಗ್ರೆಸ್ಸಿಗೆ ಸುಪ್ರೀಂ ಕೋರ್ಟ್ ಕೂಡ ತಪರಾಕಿ ನೀಡಿದಂತಾಗಿದೆ.

ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರುಸ್ಥಾಪನೆಗೆ ನಾಂದಿ ಹಾಡಿರುವ 370ನೇ ವಿಧಿ ರದ್ದತಿ ನಿರ್ಣಯಕ್ಕೆ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಮಾನ್ಯತೆಯ ಮುದ್ರೆ ಒತ್ತಿರುವುದು ಮೋದಿ ಸರಕಾರದ ದಿಟ್ಟ ಸಾಧನೆಗೆ ದೇಶದ ಜನತೆ ಶ್ಲಾಘಿಸುವುದು ಶತಸಿದ್ದ ಎಂದು ಅಬೂಬಕ್ಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!