ಚುನಾವಣಾ ಸಿದ್ಧತೆಗಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ

ಉಡುಪಿ : ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿ ಯಿಂದ ಎಲ್ಲಾ ಕಾಂಗ್ರೆಸ್ ನಾಯಕರು, ಕೆಪಿಸಿಸಿ ಸದಸ್ಯರು, ಎಲ್ಲಾ ಬ್ಲಾಕ್ ಅಧ್ಯಕ್ಷರು, ಎಲ್ಲಾ ಘಟಕಗಳ ಅಧ್ಯಕ್ಷರ ಸಭೆಯು ಇಂದು ಕೋಟೇಶ್ವರದಲ್ಲಿರುವ ಸಹನಾ ಸೆಂಟರ್‌ನಲ್ಲಿ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕಕುಮಾರ್ ಕೊಡವೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಲೋಕಸಭಾ ಚುನಾ ವಣೆ, ಶಿಕ್ಷಕ ಕ್ಷೇತ್ರ, ಪದವೀಧರ ಕ್ಷೇತ್ರದ ಚುನಾವಣೆಯನ್ನು ಎದುರಿಸಲು ಪಕ್ಷ ಸಿದ್ಧವಾಗುವ ಕುರಿತು ವಿವರಿಸಿ, ಎಲ್ಲಾ ಸದಸ್ಯರ ಅಭಿಪ್ರಾಯಗಳನ್ನು ಅಪೇಕ್ಷಿಸಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ನಮ್ಮೊಳಗೆ ಒಗ್ಗಟ್ಟಿಲ್ಲದೇ ಇನ್ನೊಬ್ಬರ ಬಗ್ಗೆ ಮಾತನಾಡುವ ಅವಕಾಶ ನಮಗಿರುವುದಿಲ್ಲ. ಹೀಗಾಗಿ ನಮ್ಮ ನಡುವೆ ಇರುವ ಸಣ್ಣಪುಟ್ಟ ಭಿನ್ನಾಭಿಪ್ರಾಯ ಗಳನ್ನು ಮರೆತು ಟೀಕೆ-ಟಿಪ್ಪಣಿಗಳಿಗೆ ಅವಕಾಶ ಕೊಡದೆ ಪಕ್ಷವನ್ನು ಬಲಿಷ್ಠಗೊಳಿಸೋಣ ಎಂದರು.

ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಕೆ.ಕೆ. ಮಂಜುನಾಥ ಕುಮಾರ್ ಚುನಾವಣೆಗೆ ನಡೆಸಿರುವ ಸಿದ್ಧತೆಯ ಮಾಹಿತಿ ನೀಡಿದರು. ಶಿಕ್ಷಕರ ಸಮಸ್ಯೆಗಳಿಗೆ ನಾನು ಸ್ಪಂಧಿಸುತ್ತೇನೆ. ಗೆಲುವಿಗೆ ಎಲ್ಲರೂ ಪ್ರಯತ್ನಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೆ.ಕೆ.ಮಂಜುನಾಥ್‌ರನ್ನು ಗೌರವಿಸಲಾಯಿತು. ಸಭೆಯಲ್ಲಿ ಪಕ್ಷದ ನಾಯಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಸುರೇಂದ್ರ ಶೆಟ್ಟಿ, ಪ್ರಖ್ಯಾತ ಶೆಟ್ಟಿ, ನೀರೆ ಕೃಷ್ಣ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಬಿಪಿನ್ ಚಂದ್ರಪಾಲ್, ಸದಾಶಿವ ದೇವಾಡಿಗ, ರಮೇಶ್ ಕಾಂಚನ್, ಹರಿಪ್ರಸಾದ್ ಶೆಟ್ಟಿ, ಶಂಕರ ಕುಂದರ್, ಅರವಿಂದ ಪೂಜಾರಿ, ದಿನಕರ ಹೇರೂರು, ಗೀತಾ ವಾಗ್ಳೆ, ಸೌರಭ್ ಬಲ್ಲಾಳ್, ಶಶಿಧರ ಶೆಟ್ಟಿ, ಇಸ್ಮಾಯಿಲ್ ಆತ್ರಾಡಿ, ತಿಮ್ಮ ಪೂಜಾರಿ, ಜಯಕುಮಾರ್, ಹರೀಶ್ ಕಿಣಿ, ಚಂದ್ರಶೇಖರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಸ್ವಾಗತಿಸಿ, ಜಿಲ್ಲಾ ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಕೆ.ಅಣ್ಣಯ್ಯ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಕುಶಲ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!