ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ
ನವದೆಹಲಿ: ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್(74) ಗುರುವಾರ ನಿಧನರಾದರು. ಆ ಬಗ್ಗೆ ಪುತ್ರ ಚಿರಾಗ್ ಪಾಸ್ವಾನ್ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ, ಬಿಹಾರದ ಲೋಕ ಜನಶಕ್ತಿ ಪಕ್ಷದ ನಾಯಕ ರಾಮ್‌ವಿಲಾಸ್ ಪಾಸ್ವಾನ್ ಅವರು ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಎದೆ ನೋವಿನ ಕಾರಣ ಕೆಲವು ವಾರಗಳ ಹಿಂದೆ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
‘ಶನಿವಾರ (ಅ.3) ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಪುನಃ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಅಗತ್ಯಬಿದ್ದರೆ ಕೆಲವು ವಾರಗಳ ನಂತರ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು’ ಎಂದು ಪುತ್ರ ಚಿರಾಗ್ ಭಾನುವಾರ ಹೇಳಿದ್ದರು.
ಲೋಕ್ ಜನಶಕ್ತಿ ಪಾರ್ಟಿ(ಎಲ್‌ಜೆಪಿ) ಸಂಸ್ಥಾಪಕ, ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 5 ದಶಕಗಳಿಂದ ರಾಜಕೀಯದಲ್ಲಿ ಸಕ್ರೀಯರಾಗಿದ್ದರು.
ಎನ್ ಡಿಎ ಮೈತ್ರಿಕೂಟದಲ್ಲಿದ್ದ ಎಲ್ ಜೆಪಿ ಪಕ್ಷದಿಂದ ಪಾಸ್ವಾನ್ ಅವರು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
Deep condolence for the demise of Ram villas pasvan, central minister.