ಆಯುರ್ವೇದ ಚಿಕಿತ್ಸೆಯಲ್ಲೂ ಪ್ರಕೃತಿಗೆ ಪ್ರಾಮುಖ್ಯತೆ: ಗುರುಕಿರಣ್
ಉಡುಪಿ: ಆಯುರ್ವೇದವು ರೋಗಿಯ ಪ್ರಕೃತಿಗೆ ಅನುಸಾರವಾಗಿ ಜೀವನ ಶೈಲಿಯನ್ನು ಹೇಳಿರುವುದಲ್ಲದೆ ಚಿಕಿತ್ಸೆಯಲ್ಲೂ ಪ್ರಕೃತಿಗೆ ಪ್ರಾಮುಖ್ಯತೆ ಯನ್ನು ನೀಡಿರುವುದು ಆಯುರ್ವೇದದ ವೈಶಿಷ್ಟ್ಯತೆ ಎಂದು ಕನ್ನಡ ಚಲನ ಚಿತ್ರರಂಗದ ಸಂಗೀತ ನಿರ್ದೇಶಕ ಗುರುಕಿರಣ್ ಹೇಳಿದ್ದಾರೆ.
ಉಡುಪಿಯ ಎಸ್.ಡಿ.ಎಂ. ಆಯುರ್ವೇದ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಬುಧವಾರ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ವಹಿಸಿದ್ದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಎಸ್., ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಡಾ.ಸುಚೇತ ಕುಮಾರಿ, ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಡಾ.ಶ್ರೀಲತಾ ಕಾಮತ್, ಸ್ನಾತಕೋತ್ತರ ವಿಭಾಗದ ಡೀನ್ ಡಾ. ಅಶೋಕ್ ಕುಮಾರ್ ಬಿ.ಎನ್. ಉಪಸ್ಥಿತರಿದ್ದರು.
ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್ ಕಣಕಟ್ಟೆ ಸ್ವಾಗತಿಸಿದರು. ಆಡಳಿತ ವಿಭಾಗ ಮುಖ್ಯಸ್ಥ ಡಾ.ವೀರ ಕುಮಾರ ಕೆ. ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮೇಘನಾ ಜಿ.ಕೆ. ವಂದಿಸಿದರು. ವಿದ್ಯಾರ್ಥಿಗಳಾದ ಶ್ರಾವ್ಯ ಹಾಗೂ ಶ್ವೇತ ಕಾರ್ಯಕ್ರಮ ನಿರೂಪಿಸಿದರು. ನಂತರ ವೈವ ಶೀರ್ಷಿಕೆಯಡಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.