ಉಡುಪಿ ನಗರ ಸಭೆಯ ಪೆರಂಪಳ್ಳಿ ವಾರ್ಡಿನ ಉಪಚುನಾವಣೆ-ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ
ಉಡುಪಿ: ಡಿ. 27 ರಂದು ನಡೆಯಲಿರುವ ಉಡುಪಿ ನಗರಸಭೆಯ ಪೆರಂಪಳ್ಳಿ ವಾರ್ಡಿನ ಉಪ ಚುನಾವಣೆ ಸಂಬಂಧ ಬಿ.ಜೆ.ಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಇಂದು ನಗರ ಸಭೆಗೆ ತೆರಳಿ ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್ ಪರ್ಣಂಕಿಲ, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ವಕ್ತಾರರಾದ ಕೆ. ರಾಘವೇಂದ್ರ ಕಿಣಿ, ನಗರ ಬಿ.ಜೆ.ಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಸಭೆಯ ಮಾಜಿ ಅಧ್ಯಕ್ಷರಾದ ಸುಮಿತ್ರಾ ಆರ್. ನಾಯಕ್,ನಗರ ಸಭಾ ಸದಸ್ಯರು, ಪಕ್ಷದ ಪ್ರಮುಖರು , ಕಾರ್ಯಕರ್ತರು ಉಪಸ್ಥಿತರಿದ್ದರು.