ಸಿಎಂ ಸಿದ್ದರಾಮಯ್ಯ, ಡಿಸಿಎಂ ನಿಂದನೆ- ಬಿಜೆಪಿ ಕಾರ್ಯಕರ್ತನ ಬಂಧನ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ನಿಂದಿಸಿ ವಾಟ್ಸಪ್ ಗ್ರೂಪ್ನಲ್ಲಿ ಆಡಿಯೋ ಸಂದೇಶ ಕಳಿಸಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಬಟ್ಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮುತ್ತೂರು ಗ್ರಾಮದ ಬೊಳಿಯ ನಿವಾಸಿ ಸಂತೋಷ್ ಪೂಜಾರಿ ಬಂಧಿತ ಆರೋಪಿ.
ಡಿ.11ರಂದು ವಾಟ್ಸಪ್ ಗ್ರೂಪೊಂದರಲ್ಲಿ ಸಂತೋಷ್ ಪೂಜಾರಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯನ್ನು ನಿಂದಿಸಿ ಆಡಿಯೋ ಹಾಕಿದ್ದರೆಂದು ಆರೋಪಿಸಲಾಗಿದೆ. ಬಳಿಕ ಈ ಆಡಿಯೋ ವಾಟ್ಸಪ್ನಲ್ಲಿ ವೈರಲಾಗಿತ್ತು.
ಈ ಕುರಿತು ಮುತ್ತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಹರಿಯಪ್ಪ ಬಜೆ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಸಂತೋಷ್ ಪೂಜಾರಿಯನ್ನು ಬಂಧಿಸಿದ್ದಾರೆ.