ಕೋವಿಡ್ ಜೆಎನ್.1 ರೂಪಾಂತರಿ: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ನೆರೆಯ ಕೇರಳದಲ್ಲಿ ಕೋವಿಡ್-19 ಜೆಎನ್.1 ರೂಪಾಂತರಿ ಪತ್ತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತೆ ಹಾಗೂ ಪೂರ್ವಭಾವಿ ಕ್ರಮಗಳ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ.

ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳಲ್ಲಿ ಅಗತ್ಯ ಸಂಖ್ಯೆಯ ಪರೀಕ್ಷೆ ನಡೆಸುವುದು, ವರದಿ ಸಲ್ಲಿಸುವುದು ಅಗತ್ಯವಾಗಿದೆ. ಆದರೆ, ಸರ್ವೇಕ್ಷಣೆ ಹೆಚ್ಚಳ ಅಥವಾ ನಿರ್ಬಂಧ ಹೇರುವ ಅವಶ್ಯಕತೆಯಿರುವುದಿಲ್ಲ.ಸರ್ಕಾರಿ, ಖಾಸಗಿ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಎಲ್ಲಾ SARI ಪ್ರಕರಣಗಳು ಹಾಗೂ 20 ಐಎಲ್ ಐ ಪ್ರಕರಣಗಳ ಪೈಕಿ 1 ಐಎಲ್ ಐ ಪ್ರಕರಣವನ್ನು ಕೋವಿಡ್-19 ಪರೀಕ್ಷೆಗೆ  ಒಳಪಡಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ. 

ಅಂತಾರಾಷ್ಟ್ರೀಯ ಪ್ರಯಾಣದ ಹಿನ್ನೆಲೆಯಿದ್ದು, ಕೋವಿಡ್-19 ಸೋಂಕಿನ ಲಕ್ಷಣ ಹೊಂದಿರುವವರು, ಗುಂಪು ಗುಂಪಾಗಿ ಸೇರುವ ಪ್ರಕರಣಗಳು ಹಾಗೂ ಮರಣಗಳು ವರದಿಯಾಗುವ ಸಂದರ್ಭದಲ್ಲಿ ಅಗತ್ಯ ಸಂಖ್ಯೆಯ ಮಾದರಿಗಳನ್ನು ಜಿನೋಮ್ ಸಿಕ್ವೇನ್ಸಿಂಗ್ ಪರೀಕ್ಷೆಗೆ ರವಾನಿಸಬೇಕು ಎಂದು ಸೂಚಿಸಲಾಗಿದೆ.

ತೀವ್ರ ಸ್ವರೂಪದ ರೋಗ ಲಕ್ಷಣ ಹೊಂದಿದವರು, ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, SARI ಪ್ರಕರಣಗಳು ಹಾಗೂ ಸುಧೀರ್ಘ ಅವಧಿಗೆ ಆಸ್ಪತ್ರೆಗೆ ದಾಖಲಾದ ಪ್ರಕರಣಗಳು, ಕೋವಿಡ್ ಲಸಿಕೆಯ ಎರಡು ಡೋಸ್ ವ್ಯಾಕ್ತಿನ್ ಪಡೆದ ನಂತರವೂ ಸೋಂಕು ಮೃತಪಟ್ಟವರು, ಕೋವಿಡ್ -19 ಮರಣ ಪ್ರಕರಣಗಳು, ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವರದಿಯಾಗುವ 25ಕ್ಕಿಂತ ಕಡಿಮೆ CT Value ಇರುವ ಮಾದರಿಗಳನ್ನು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಗೆ ಜಿನೋಮ್ ಸಿಕ್ವೇನ್ಸಿಂಗ್ ಪರೀಕ್ಷೆಗೆ ಕಳುಹಿಸುವ ನಿಟ್ಟಿನಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಅಗತ್ಯ ಸಮನ್ವಯ ವಹಿಸಬೇಕು ಎಂದು ಹೇಳಲಾಗಿದೆ.

ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಡಿಸೆಂಬರ್ 3-4ನೇ ವಾರದೊಳಗೆ ಅಣಕು ಪ್ರದರ್ಶನ ಪೂರ್ಣಗೊಳಿಸಲು ಸೂಚಿಸಲಾಗಿದೆ. 

Leave a Reply

Your email address will not be published. Required fields are marked *

error: Content is protected !!