ದೇಶಾದ್ಯಂತ ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಣೆ, ಜೂ.8ರಿಂದ ಮಾಲ್, ಹೋಟೆಲ್ ಆರಂಭ

ನವದೆಹಲಿ: ಕೊರೋನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಯುವುದಕ್ಕಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ ಡೌನ್ ಅನ್ನು ಜೂನ್ 30ರ ವರೆಗೆ ವಿಸ್ತರಿಸಿದೆ. ಲಾಕ್ ಡೌನ್ 5.0 ಕಂಟೇನ್ ಮೆಂಟ್ ಜೋನ್ ಗೆ ಮಾತ್ರ ಸೀಮಿತವಾಗಿದ್ದು, ಇತರೆ ಪ್ರದೇಶಗಳಿಗೆ ಮತ್ತಷ್ಟು ವಿನಾಯಿತಿಗಳನ್ನು ನೀಡಿದೆ. 

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಮೊದಲನೇ ಹಂತದಲ್ಲಿ ಧಾರ್ಮಿಕ ಕೇಂದ್ರಗಳು, ದೇವಸ್ಥಾನಗಳು, ಮಾಲ್, ಹೋಟೆಲ್ ಆರಂಭಿಸಲು ಜೂನ್ 8ರಿಂದ ಅನುಮತಿ ನೀಡಬಹುದಾಗಿದೆ.

ಶಾಲೆ ಮತ್ತು ಕಾಲೇಜು ಪುನರಾರಂಭಿಸುವ ಬಗ್ಗೆ ಜುಲೈನಲ್ಲಿ ನಿರ್ಧರಿಸಲಾಗುತ್ತದೆ. ರಾಜ್ಯ ಸರ್ಕಾರಗಳು, ಪಾಲಕರು ಹಾಗೂ ಶಿಕ್ಷಣ ಸಂಸ್ಥೆಗಳೊಂದಿಗೆ ಚರ್ಚೆಯ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ

ಮೂರನೇ ಹಂತದಲ್ಲಿ ಅಂತರರಾಷ್ಟ್ರೀಯ ವಿಮಾನ ಸಂಚಾರ, ಮೆಟ್ರೋ ರೈಲಿನ ಕಾರ್ಯಾಚರಣೆ, ಸಿನೆಮಾ ಹಾಲ್‌ಗಳು, ಜಿಮ್, ಈಜುಕೊಳಗಳು, ಇತರೆ ಮನರಂಜನಾ ಸ್ಥಳಗಳನ್ನು ತೆರೆಯುವ ದಿನಾಂಕದ ಬಗ್ಗೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುತ್ತದೆ ಎಂದು ತಿಳಿಸಿದೆ.

ಮೇ 31ರಂದು ಲಾಕ್‌ಡೌನ್‌ 4 ಮುಕ್ತಾಯವಾಗಲಿದ್ದು, ಲಾಕ್‌ಡೌನ್‌ 5ರಲ್ಲಿ ರಾತ್ರಿ ಕರ್ಫ್ಯೂ ಸಮಯ ಸಡಿಸಿಲಾಗಿದೆ. ರಾತ್ರಿ 7ರಿಂದ ಬೆಳಿಗ್ಗೆ 7ರ ಬದಲು, ರಾತ್ರಿ 9ರಿಂದ ಬೆಳಿಗ್ಗೆ 5ರ ವರೆಗೂ ನಿಗದಿ ಪಡಿಸಲಾಗಿದೆ. ಲಾಕ್‌ಡೌನ್‌ ತೆರವು ಭಾಗ 1ರಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಗಮನ ಹರಿಸಲಾಗಿದೆ.

ರಾಜ್ಯಗಳ ಒಳಗೆ ಹಾಗೂ ರಾಜ್ಯಗಳಿಂದ ರಾಜ್ಯಗಳಿಗೆ ಜನರ ಮತ್ತು ಸರಕು, ಸಾಮಗ್ರಿಗಳ ಸಂಚಾರದಲ್ಲಿ ನಿರ್ಬಂಧ ಇರುವುದಿಲ್ಲ.

ಕೋವಿಡ್-19 ನಿಯಂತ್ರಣಕ್ಕೆ ಕೇಂದ್ರದ ನಿರ್ದೇಶನಗಳು
1. ಸಾರ್ವಜನಿಕ ಸ್ಥಳದಲ್ಲಿ, ಕಚೇರಿಯ ಒಳಗೆ, ಪ್ರಯಾಣದ ವೇಳೆ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು.
2. ಒಬ್ಬೊರಿಂದ ಮತ್ತೊಬ್ಬರ ಮಧ್ಯೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು.
3. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿ ಸಭೆ ಸಮಾರಂಭ ನಡೆಸುವಂತಿಲ್ಲ. ಮದುವೆಯಲ್ಲಿ 50ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಅ0ತ್ಯಕ್ರಿಯೆ, ಅಂತಿಮನ ನಮನದ ವೇಳೆ 20ಕ್ಕಿಂತ ಹೆಚ್ಚು ಮಂದಿ ಭಾಗವಹಿಸುವಂತಿಲ್ಲ.
4.ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ದಂಡ ವಿಧಿಸಲಾಗುವುದು. ಈ ಸಂಬಂಧ ರಾಜ್ಯ ಸರ್ಕಾರ, ಸ್ಥಳೀಯ ಆಡಳಿತಾಧಿಕಾರಿಗಳ ಸೂಚನೆಯಂತೆ ದಂಡ ವಿಧಿಸುವಂತೆ ಸೂಚಿಸಲಾಗಿದೆ.

5. ಸಾರ್ವಜನಿಕ ಸ್ಥಳದಲ್ಲಿ ಮದ್ಯ ಕುಡಿಯುವುದು, ಪಾನ್, ಗುಟ್ಕಾ, ತಂಬಾಕು ತಿನ್ನುವುದು, ಸಿಗರೇಟ್ ಸೇದುವುದು ನಿಷೇಧ.
6. ಕಂಪನಿಗಳು, ಸಂಸ್ಥೆಗಳು ಸಾಧ್ಯವಾದಷ್ಟು ವರ್ಕ್ ಫ್ರಂ ಹೋಮ್ ಅನುಸರಿಸಬೇಕು.
7. ಕೆಲಸ ಅಥವಾ ವ್ಯವಹಾರದ ಸಮಯದಲ್ಲಿ ಅಧಿಕಾರಿಗಳು, ಕೆಲಸದ ಸ್ಥಳ, ಅಂಗಡಿ, ಮಾರುಕಟ್ಟೆ, ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು.
8. ಕಂಪನಿ, ವ್ಯವಹಾರದ ಸ್ಥಳಗಲ್ಲಿ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಇರಲೇಬೇಕು. ಜೊತೆಗೆ ಸಿಬ್ಬಂದಿ ಒಳಗೆ ಹಾಗೂ ಹೊರಗೆ ಹೋಗುವ ಜಾಗದಲ್ಲಿ ಸ್ಯಾನಿಟೈಜರ್ ಇರಿಸಬೇಕು.
9. ಕಚೇರಿಯ ಡೋರ್ ಹ್ಯಾಂಡಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಆಗಾಗ ಸ್ಯಾನಿಟೈಜೇಷನ್ ಮಾಡಬೇಕು.
10.ಕಚೇರಿಯಲ್ಲಿ ಕೆಲಸ ಮಾಡುವಾಗ ಸಿಬ್ಬಂದಿಯ ಮಧ್ಯೆ ಅಂತರ ಇರಬೇಕು. ಜೊತೆಗೆ ಶಿಫ್ಟ್ ಗಳ ಮಧ್ಯೆ ಸ್ವಚ್ಛತೆ, ಸ್ಯಾನಿಟೈಜೇಷನ್ ಮಾಡಲು ಅನುಕೂಲವಾಗುವಂತೆ ಸಮಯ ನಿಗದಿ ಮಾಡಬೇಕು.

Leave a Reply

Your email address will not be published. Required fields are marked *

error: Content is protected !!