ಮಣಿಪಾಲ: ಕಾಲೇಜಿನಲ್ಲಿ ಪಾಠ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಪ್ರಾಧ್ಯಾಪಕ ಮೃತ್ಯು

ಮಣಿಪಾಲ: ಕಾಲೇಜಿನಲ್ಲಿ ಪಾಠ ಮಾಡುತ್ತಿರುವಾಗಲೇ ಹಠಾತ್ ಆಗಿ ಹೃದಯಾಘಾತವಾಗಿ ಪ್ರಾಧ್ಯಾಪಕರೊಬ್ಬರು ಮೃತಪಟ್ಟ ಘಟನೆ ಮಣಿಪಾಲ ಫಾರ್ಮಸ್ಯುಟಿಕಲ್ ಸೈನ್ಸ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11.50ರ ಸುಮಾರಿಗೆ ನಡೆದಿದೆ.

ಮೃತರನ್ನು ಮಣಿಪಾಲ ಕಾಲೇಜ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸ್ ಇದರ ಪ್ರೊ. ಡಾ.ಅಲೆಕ್ಸ್ ಜೋಸೆಫ್(47) ಎಂದು ಗುರುತಿಸಲಾಗಿದೆ. ಇವರು ತನ್ನ ಪತ್ನಿ (ಅದೇ ಕಾಲೇಜಿನ ಸಹಾಯಕ ಪ್ರೊ. ಎಂಜೆಲ್ ಟ್ರೀಸಾ ಅಲೆಕ್ಸ್ ) ಜೊತೆ ಬೆಳಿಗ್ಗೆ 8 ಗಂಟೆಗೆ ಕಾಲೇಜಿಗೆ ತೆರಳಿದ್ದರು.

ಕಾಲೇಜಿನಲ್ಲಿರುವ ವೇಳೆ ಡಾ.ಅಲೆಕ್ಸ್ ಜೋಸೆಫ್ ಅವರಿಗೆ ವಿಪರೀತ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಅಲೆಕ್ಸ್ ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!