ಉಡುಪಿ: ನಿವೃತ್ತ ಬ್ಯಾಂಕ್ ಅಧಿಕಾರಿ, ರೇಖಿ ಚಿಕಿತ್ಸಾಕ ವೈ.ಕೆ. ಮೂರ್ತಿ ನಿಧನ
ಉಡುಪಿ, ಡಿ.19: ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಅಧಿಕಾರಿ ವೈ.ಕೆ.ಮೂರ್ತಿ (83) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮಂಗಳೂರು ಮೂಲದ ಇವರು ಉಡುಪಿಯ ಕಿದಿಯೂರಿನಲ್ಲಿ ವಾಸ ಮಾಡಿಕೊಂಡಿದ್ದರು. ಮಂಗಳೂರಿನ ಎಸ್ಕೆಎಸಿಎಂ ಸೊಸೈಟಿಯಲ್ಲಿ ವೃತ್ತಿಜೀವನ ಪ್ರಾರಂಭಿಸಿದ ಇವರು, ಮುಂದೆ ಸಿಂಡಿಕೇಟ್ ಬ್ಯಾಂಕ್ ಸೇರಿ, ವಿವಿಧ ಶಾಖೆಗಳಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.
ಬ್ಯಾಂಕಿನ ಮಣಿಪಾಲದ ಪ್ರಧಾನ ಕಚೇರಿಯಲ್ಲಿ ಡೆಪ್ಯುಟಿ ಪರ್ಸನೆಲ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾದರು. ನಿವೃತ್ತಿಯ ಬಳಿಕ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಸುಮಾರು ಒಂದೂವರೆ ದಶಕ ಸೇವೆ ಸಲ್ಲಿಸಿದರು. ಪರ್ಯಾಯ ಚಿಕಿತ್ಸಾ ಪದ್ಧತಿಯಾಗಿರುವ ರೇಖಿಯನ್ನು ಉಡುಪಿಗೆ ಪರಿಚಯಿಸಿದ ಇವರು, ಸಾವಿರಾರು ಮಂದಿಗೆ ರೇಖಿ ದೀಕ್ಷೆ ನೀಡಿದ್ದರು. ಇವರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.