ವಿಶ್ವದ ಬಂಟರೆಲ್ಲರನ್ನು ಒಂದೆಡೆ ಸೇರಿಸಿದ ತೃಪ್ತಿ ಇದೆ: ಐಕಳ ಹರೀಶ್
ವಿಶ್ವ ಬಂಟರ ಸಮ್ಮೇಳನದ ಖರ್ಚು ವೆಚ್ಚಗಳ ಸಭೆ
ಮುಲ್ಕಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನ 2023 ಇದರ ಖರ್ಚು ವೆಚ್ಚಗಳ ಕುರಿತು ಮುಲ್ಕಿಯಲ್ಲಿರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿರುವ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಛೇರಿಯಲ್ಲಿ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಹಿಸಿದ್ದರು. ವಿಶ್ವದ ಬಂಟರೆಲ್ಲರನ್ನು ಒಂದೇ ಚಪ್ಪರದಡಿಯಲ್ಲಿ ಸಮ್ಮೇಳನದ ಮೂಲಕ ಒಟ್ಟುಗೂಡಿಸಿದ ತೃಪ್ತಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಇದೆ. ಉಡುಪಿಯಲ್ಲಿ ಎರಡು ದಿನಗಳ ಕಾಲ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಲೋತ್ಸವದ ಮೂಲಕ ಕ್ರೀಡಾಳುಗಳನ್ನು ಮತ್ತು ಕಲಾವಿದರನ್ನು ಒಟ್ಟು ಸೇರಿಸಿ ನೀಡಿದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಸಮಾಜದ ಎಲ್ಲರೂ ಸಹಕಾರ ನೀಡಿದ್ದಾರೆ ಎಂದರು.
ಮುಂದಿನ ದಿನಗಳಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ವಿವಿಧ ಯೋಜನೆಗಳಲ್ಲಿ ಸಮಾಜದ ಪರ ಕಾರ್ಯಕ್ರಮಗಳನ್ನು ಮಾಡುವುದಾಗಿ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಸಮಾಜವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ದಾನಿಗಳು ಒಕ್ಕೂಟದ ಜೊತೆಗೆ ಕೈಜೋಡಿಸ ಬೇಕೆಂದರು.
ಸಭೆಯಲ್ಲಿ ಉಪಾಧ್ಯಕ್ಷರಾದ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಜೊತೆ -ಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ ರಂಗೋಲಿ, ವಿಶ್ವ ಬಂಟರ ಸಮ್ಮೇಳನ 2023ರ ವಿವಿಧ ಸಮಿತಿಗಳ ಸಂಚಾಲಕರು, ಸಹ -ಸಂಚಾಲಕರು ಹಾಗೂ ಕಾರ್ಯಕಾರಿ ಸಮಿತಿ ಸರ್ವ-ಸದಸ್ಯರುಗಳು, ಒಕ್ಕೂಟದ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಸಿಬ್ಬಂದಿಗಳು ಉಪಸ್ಥಿತರಿದ್ದರು.