ಕಿಮ್ಸ್ ಪಿ.ಜಿ.ಮೆಡಿಕ್ವಿಜ್ – 2023: ಅಂತರ್ ವೈದ್ಯಕೀಯ ಕಾಲೇಜು- ವೈದ್ಯಕೀಯ ರಸ ಪ್ರಶ್ನೆ

ಮಂಗಳೂರು ಡಿ.19: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತç ವಿಭಾಗದ ಆಶ್ರಯದಲ್ಲಿ ಸ್ನಾತಕೋತರ ವೈದ್ಯಕೀಯ ಶಾಸ್ತ್ರ ಶಿಕ್ಷಣ ವಿದ್ಯಾರ್ಥಿಗಳಿಗಾಗಿ 3ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ “ ಕಿಮ್ಸ್ ಪಿ.ಜಿ. ಮೆಡಿಕ್ವಿಜ್ – 2023” ಸ್ಪರ್ಧಾಕೂಟವನ್ನು ಡಿ.23 ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ ವೈದ್ಯಕೀಯ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲರು ತಮ್ಮ ಕಾಲೇಜಿನ ವೈದ್ಯಕೀಯ ಶಾಸ್ತç ವಿಭಾಗದ ಸ್ನಾತಕೋತರ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ತಂಡದ ಹೆಸರುಗಳನ್ನು ಸ್ಪರ್ಧಾಕೂಟದಲ್ಲಿ ಭಾಗವಹಿಸಲು ನೋಂದಾಯಿಸ ಬಹುದು. ಈ ಸ್ಪರ್ಧಾ ಕೂಟವು ಕೇವಲ ಆಂತರಿಕ ವೈದ್ಯಕೀಯ ಶಾಸ್ತ್ರ ವಿಷಯದ ಬಗ್ಗೆ ಸೀಮಿತ ಗೊಂಡಿದೆ.

ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಯು.ಕೆ. ಮೋನು ಯವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಸ್ಪರ್ಧಾ ವಿಜೇತರಿಗೆ ಆಕರ್ಷಕ ಪ್ರಶಸ್ತಿ, ಬಹುಮಾನ ಹಾಗೂ ಪ್ರಶಸ್ತಿ ಪ್ರಮಾಣ ಪತ್ರವನ್ನು ಪ್ರಧಾನ ಮಾಡಲಿರುವರು. ಕಾರ್ಯನಿರ್ವಾಹಕ ನಿರ್ದೇಶಕ ಅಬ್ದುಲ್ ರೆಹಮಾನ್, ಪ್ರಾಂಶುಪಾಲರಾದ ಪ್ರೋ| ಡಾ| ರತ್ನಾಕರ ಯು.ಪಿ. ವೈದ್ಯಕೀಯ ಅಧೀಕ್ಷಕರಾದ ಪ್ರೋ ಡಾ| ಹರೀಶ್ ಶೆಟ್ಟಿ, ಮುಖ್ಯ ಆಡಳಿತ ಅಧಿಕಾರಿಯಾದ ಡಾ| ರೋಹನ್ ಮೋನಿಸ್ ಮತ್ತು ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆ ಸಮಿತಿಯ ಅಧ್ಯಕ್ಷರಾದ ಪ್ರೋ| ಡಾ| ಮೊಹಮ್ಮದ್ ಇಸ್ಮಾಯಿಲ್ ಹಾಗೂ ಸದಸ್ಯರಾದ ಪ್ರೋ ಡಾ| ಎಂ.ವಿ. ಪ್ರಭು ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿರುವರು.

ಹೆಚ್ಚಿನ ಮಾಹಿತಿ/ವಿವರಗಳಿಗಾಗಿ ಸ್ಪರ್ಧಾ ಕೂಟದ ಸಂಘಟಕರಾದ ಹಾಗೂ ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ| ಡಾ|| ದೇವದಾಸ್ ರೈ ಅವರ ಮೊಬೈಲ್ 9845081145 ಸಂಪರ್ಕಿಸಬಹುದು.

Leave a Reply

Your email address will not be published. Required fields are marked *

error: Content is protected !!