ನಂದಿನಿ ಬ್ರಾಂಡ್ನ ಹೊಸ ಉತ್ಪನ್ನಗಳ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್ ರಾಯಭಾರಿ ಶಿವರಾಜ್ ಕುಮಾರ್ ಅವರ ಜಾಹೀರಾತನ್ನು ಬಿಡುಗಡೆ ಮಾಡಿದರು ಹಾಗೂ ಶಿವರಾಜ್ ಕುಮಾರ್ ಅವರನ್ನು ಸನ್ಮಾನಿಸಿದರು. ಸಮಾರಂಭದಲ್ಲಿ ಗೀತಾ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಕೆ.ಎಂ.ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮೊದಲಾದವರು ಭಾಗವಹಿಸಿದ್ದರು.