ಬಿಟ್ ಕಾಯಿನ್ ಹಗರಣ: ಸಾಕ್ಷ್ಯಗಳಿದ್ದಲ್ಲಿ ಮಾಹಿತಿ ನೀಡಲು ಎಸ್ಐಟಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಬಿಟ್ ಕಾಯಿನ್ ಪ್ರಕರಣವನ್ನು ಸಿಐಡಿ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆ ನಡೆಸುತ್ತಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರ ಹಾಗೂ ಮಾಹಿತಿಗಳಿದ್ದರೆ ಸಾರ್ವಜನಿಕರು ಹಂಚಿಕೊಳ್ಳಬೇಕೆಂದು ಎಸ್ಐಟಿ ಮನವಿ ಮಾಡಿದೆ.

ಹಗರಣ ಸಂಬಂಧ ಮಾಹಿತಿ ಅಥವಾ ಸಾಕ್ಷ್ಯಾಧಾರ ಇದ್ದರೆ ಅರಮನೆ ರಸ್ತೆಯಲ್ಲಿರುವ ಸಿಐಡಿ ಪ್ರಧಾನ ಕಚೇರಿಗೆ ಬಂದು ಸಂಪರ್ಕಿಸಬಹುದು. ಅಥವಾ sitcid2023@ಗೆ ಇಮೇಲ್ ಮಾಡಬಹುದು. ಜೊತೆಗೆ 94808 00151 ಸಂಖ್ಯೆಗೆ ವಾಟ್ಸ್ಆ್ಯಪ್ ಮೂಲಕ ಮಾಹಿತಿ ನೀಡಬಹುದು ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಕೋಟ್ಯಂತರ ರೂಪಾಯಿ ಬಿಟ್ ಕಾಯಿನ್ ಅವ್ಯವಹಾರ ಆರೋಪ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಯಾನೆ ಶ್ರೀಕೃಷ್ಣನನ್ನು ಸಿಸಿಬಿ ಪೊಲೀಸರು ಬಂಧಿಸಿ, ಸುದೀರ್ಘ ವಿಚಾರಣೆ ನಡೆಸಿದ್ದರು. ತನಿಖೆಯಲ್ಲಿ ಸರಕಾರದ ಪೊರ್ಟಲ್‌ ಗಳು, ಆನ್ಲೈನ್ ಗೇಮಿಂಗ್ ವೆಬ್‌ ಸೈಟ್ ಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ವಂಚಿಸಿರುವುದು ಬೆಳಕಿಗೆ ಬಂದಿತ್ತು. ತನಿಖೆ ನಡೆಸಿದ ತನಿಖಾಧಿಕಾರಿ ಗಳು ಹಾಗೂ ಇತರೆ ಪೊಲೀಸ್ ಸಿಬ್ಬಂದಿ ವಿರುದ್ಧವೂ ಅಕ್ರಮವೆಸಗಿರುವ ಸಂಬಂಧ ಆರೋಪ ಕೇಳಿಬಂದಿತ್ತು.

Leave a Reply

Your email address will not be published. Required fields are marked *

error: Content is protected !!