ಉಡುಪಿ: ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಉಡುಪಿ: ಪ್ರಥಮ ಪಿಯುಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದು ಸಂಭವಿಸಿದೆ.

ಅಫ್ಕಾರ್ (17) ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ.ಈತ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಹುಟ್ಟಿನಿಂದಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಈ ವಿದ್ಯಾರ್ಥಿ, ಡಿ. 6 ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದಿದ್ದ .

ಡಿಸೆಂಬರ್ 18 ರಂದು ಆಸ್ಪತ್ರೆಯಿಂದ ಅಫ್ಕಾರ್ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದ. ದುರದೃಷ್ಟವಶಾತ್ ಊರಿಗೆ ಹಿಂದಿರುಗಿದ ಸಂದರ್ಭ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಇವತ್ತು ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

error: Content is protected !!