ಹಿಜಾಬ್ ನಿಷೇಧ ಆದೇಶವನ್ನು ಹಿಂಪಡೆದಿಲ್ಲ; ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ- ಸಿಎಂ ಸಿದ್ದರಾಮಯ್ಯ
ಮೈಸೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ಇನ್ನೂ ಹಿಂಪಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕಾನೂನನ್ನು ಇನ್ನೂ ವಾಪಸ್ ಪಡೆದಿಲ್ಲ. ಶುಕ್ರವಾರ ಕವಲಂದೆಯಲ್ಲಿ ಯಾರೋ ಪ್ರಶ್ನೆ ಕೇಳಿದ್ದಕ್ಕೆ ಆ ರೀತಿ ಹೇಳಿದ್ದೇನೆ ಎಂದು ತಿಳಿಸಿದರು.
ಆದರೆ ಹಿಜಾಬ್ ನಿಷೇಧ ಹಿಂಪಡೆಯುವ ಬಗ್ಗೆ ಯೋಚನೆ ಮಾಡಲಾಗಿದೆ. ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.