ಉಡುಪಿ ಪ್ರಸಾದ್ ನೇತ್ರಾಲಯ: ಡಿ.24 ಲಾಸಿಕ್/ಸ್ಮೈಲ್/ಪಿಆರ್ಕೆ ಲೇಸರ್ ಕಣ್ಣಿನ ಉಚಿತ ತಪಾಸಣೆ
ಉಡುಪಿ: ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಉಡುಪಿ ಕೇಂದ್ರದಲ್ಲಿ ರಿಪ್ರಾಕ್ಟಿವ್ ಕಣ್ಣಿನ ದೋಷ ಅರಿವು ಮಾಸ’ ಪ್ರಯುಕ್ತ ‘ಲಾಸಿಕ್-ಸ್ಮೈಲ್ ಮತ್ತು ಪಿಆರ್ಕೆ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರವು ಡಿ.24, ಭಾನುವಾರದಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ.
18 ವರ್ಷ ಪ್ರಾಯದಿಂದ ಸುಮಾರು 50 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾಂಟಾಕ್ಟ್ ಲೆನ್ಸ್ನಿಂದ ಮುಕ್ತಿ ಹೊಂದ ಬಹುದಲ್ಲದೇ ಈ ಚಿಕಿತ್ಸೆಯಿಂದ 5 ನಿಮಿಷಗಳಲ್ಲಿ ಪರಿಶುದ್ಧವಾದ ದೃಷ್ಟಿಯನ್ನು ಪಡೆಯಬಹುದು.
ಚಿಕಿತ್ಸೆಯ ನಂತರ ಕೂಡಲೇ ರೋಗಿಯು ತನ್ನೆಲ್ಲಾ ದೈನಂದಿನ ಚಟುವಟಿಕೆಗಳನ್ನು ಮಾಡಬಹುದು. ಯಾವುದೇ ನೋವು ಈ ಚಿಕಿತ್ಸೆಯಿಂದ ಉಂಟಾಗುವುದಿಲ್ಲ.
ಶಿಬಿರದಲ್ಲಿ ದೃಷ್ಟಿ ಪರೀಕ್ಷೆ, ಕಣ್ಣಿನ ನರ ಪರೀಕ್ಷೆ, ಟೋಪೋಗ್ರಫಿ ಸ್ಕ್ಯಾನ್(ಶಸ್ತ್ರ ಚಿಕಿತ್ಸೆಗೆ ಮೊದಲು ಮಾಡುವ ಪರೀಕ್ಷೆ) ಮೊದಲಾದ ಸೌಲಭ್ಯಗಳನ್ನು ಶಿಬಿರದಲ್ಲಿ ಉಚಿತವಾಗಿ ಒದಗಿಸಲಾಗುವುದು. ಚಿಕಿತ್ಸೆಗೆ ಅರ್ಹವಾದ ರೋಗಿಗಳಿಗೆ ಲೇಸರ್ ಚಿಕಿತ್ಸೆಯನ್ನು 50% ವರೆಗಿನ ರಿಯಾಯಿತಿ ದರದಲ್ಲಿ ನಡೆಸಲಾಗುವುದು. ಹೆಚ್ಚಿನ ವಿವರಗಳಿಗೆ ಈ ನಂಬರನ್ನು ಸ0ಪರ್ಕಿಸಬಹುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.