ಉಡುಪಿ ಪೆರಂಪಳ್ಳಿ ವಾರ್ಡ್- ಉಪಚುನಾವಣೆ: ಮನೆ ಮನೆ ಪ್ರಚಾರ

ಉಡುಪಿ: ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿಗೆ ನಡೆಯುವ ಉಪ ಚುನಾವಣೆಯ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡಾ ಡಿ’ಸೋಜಾ ಪರವಾಗಿ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ಅಭಿಯಾನದಲ್ಲಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ನಗರಸಭಾ ಸದಸ್ಯರಾದ ಪ್ರಭಾಕರ ಪೂಜಾರಿ, ಗಿರೀಶ್ ಎಮ್. ಅಂಚನ್, ಮಾಜಿ ನಗರಸಭಾ ಸದಸ್ಯೆ ಅರುಣಾ ಪೂಜಾರಿ, ಸ್ಥಳೀಯ ಪ್ರಮುಖರಾದ ಸಂತೋಷ್ ಅಮೀನ್, ಸುಮಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!