ಕುಂದಾಪುರ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜ್: ರಕ್ತದಾನ ಶಿಬಿರ
ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗು ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಸಹಯೋಗದೊಂದಿಗೆ, ಹೆಚ್ಡಿಎಫ್ಸಿ ಬ್ಯಾಂಕ್ ಕುಂದಾಪುರ ಇವರ ಪ್ರಾಯೋಜಕತ್ವದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಡಾ| ಪುಲಕಿತ ಭಾಟಿಯ ಎಮ್. ಡಿ ರೋಗಶಾಸ್ತ್ರಜ್ನ ಐಆರ್ ಸಿ ಎಸ್ ಕುಂದಾಪುರ ಇವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಕ್ತದಾನದ ಮಹತ್ವವನ್ನು ವಿವರಿಸುತ್ತ, ರಕ್ತದಾನದ ಪೂರ್ವಭಾವಿ ಪರೀಕ್ಷೆಗಳ ಬಗ್ಗೆ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ|ಅಬ್ದುಲ್ ಕರೀಮ್ ಅವರು ಮಾತನಾಡಿ ರಕ್ತದಾನ ಬಹಳ ಪ್ರಾಮುಖ್ಯವಾದುದು ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ವಿಧ್ಯಾರ್ಥಿಗಳನ್ನು ಹುರಿದುಂಬಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಡಿಎಫ್ಸಿ ಬ್ಯಾಂಕ್ ಲೋನ್ ವಿಭಾಗ ಕುಂದಾಪುರ ಇದರ ಮುಖ್ಯಸ್ಥೆ ಕುಮಾರಿ ಪಲ್ಲವಿ ಶೆಟ್ಟಿ, ಅನಂತ್ ಕುಂದಾಪುರ, ಪೋಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಸುಧಾಕರ ಶೆಟ್ಟಿ, ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿ ಸೋಜಾ, ರಾಷ್ಟ್ರೀಯ ಸೇವಾ ಯೋಜನಾ ಕೋಶದ ಸಂಯೋಜಕರಾದ ಪ್ರೊ. ಬಾಲನಾಗೇಶ್ವರ್ ಎಸ್, ಕಾಲೇಜು ಸಿಬ್ಬಂದಿ ವರ್ಗ ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೊ.ಅಕ್ಷತ ನಾಯಕ್ ಕಾರ್ಯಕ್ರಮ ನಿರೂಪಿಸಿದರು.