ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ- ಸಚಿವ ಶಿವಾನಂದ ಪಾಟೀಲ್ ಹೇಳಿಕೆ

ಚಿಕ್ಕೋಡಿ: ರೈತರಿಗೆ ಪರಿಹಾರ ನೀಡಿದ ಬಳಿಕ ರೈತರ ಆತ್ಮಹತ್ಯೆ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಶಿವಾನಂದ್ ಪಾಟೀಲ್ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ.

ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟ ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜವನ್ನೂ ಕೊಟ್ಟರು, ಗೊಬ್ಬರವನ್ನೂ ಕೊಟ್ಟರು. ಇನ್ನೂ ರೈತರಿಗೆ ಒಂದೆ ಆಸೆ ಇದೆ ಏನಪ್ಪಾ ಎಂದರೆ, ಮ್ಯಾಲ ಮ್ಯಾಲ ಬರಗಾಲ ಬೀಳಲಿ ಎಂದು. ಏಕೆಂದರೆ, ಸಾಲ ಮನ್ನಾ ಆಗುತ್ತೆ ಅಂದು. ಈ ರೀತಿಯಾಗಿ ಬಯಸಬಾರದು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!