ಉಡುಪಿ: ನಗರಸಭೆ ಉಪಚುನಾವಣೆ- ಸಂತೆ, ಜಾತ್ರೆ ನಿಷೇಧ
ಉಡುಪಿ, ಡಿ.26: ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸ್ಥಾನಗಳಿಗೆ ಡಿ. 27 ರಂದು ಚುನಾವಣೆ ನಡೆಯಲಿದ್ದು, ಮತದಾನದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವಂತೆ, ಅಂದು ಬೆಳಗ್ಗೆ 6 ಗಂಟೆಯಿಂದ ಮತದಾನ ಮುಕ್ತಾಯವಾಗುವವರೆಗೆ ಮತದಾನ ನಡೆಯುವ ಉಡುಪಿ ನಗರಸಭೆಯ 13ನೇ ಮೂಡು ಪೆರಂಪಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೇ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.