ಮಂಗಳೂರು- ಮಡಗಾಂವ್ ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಓಡಾಟಕ್ಕೆ ಚಾಲನೆ
ಮಂಗಳೂರು: ಮಂಗಳೂರು – ಮಡಗಾಂವ್ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಓಡಾಟಕ್ಕೆ ಮಂಗಳವಾರ ಬೆಳಿಗ್ಗೆ ಪ್ರಾಯೋಗಿಕ ಓಡಾಟಕ್ಕೆ ಚಾಲನೆ ನೀಡಲಾಯಿತು
ಮಂಗಳವಾರ ಬೆಳಗ್ಗೆ 8:30 ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಪ್ರಾಯೋಗಿಕ ಓಡಾಟ ಆರಂಭಿಸುವ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು.
ಮಂಗಳೂರು ಸೆಂಟ್ರಲ್ ನಿಂದ ಬೆಳಿಗ್ಗೆ 8.30 ಕ್ಕೆ ಹೊರಟ ಈ ರೈಲು ಮಧ್ಯಾಹ್ನ 1:05 ಕ್ಕೆ ಮಡಗಾಂವ್ ತಲುಪಲಿದೆ.
ಉಡುಪಿ ಮತ್ತು ಕಾರವಾರದಲ್ಲಿ ಈ ರೈಲಿಗೆ ನಿಲುಗಡೆ ಇರುತ್ತದೆ. ಸಂಜೆ 6:10 ಕ್ಕೆ ಮಡಗಾಂವ್ ನಿಂದ ಹೊರಟು ರಾತ್ರಿ 10.45 ಕ್ಕೆ ರೈಲು ಮಂಗಳೂರು ಸೆಂಟ್ರಲ್ ತಲುಪಲಿದೆ.
The coastal Christians who opposed Konkan Railway, are the maximum travellers now on Konkan Railway!!