ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು- ವಿಶ್ವ ಹಿಂದೂ ಪರಿಷದ್ ಖಂಡನೆ
ಮಂಗಳೂರು: ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ.ಪ್ರಭಾಕರ ಭಟ್ ರವರ ಮೇಲೆ ಕೇಸುದಾಖಲಿಸಿದ್ದು ಖಂಡನೀಯ, ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ಕೇಂದ್ರ ಸರಕಾರ ನೀಡಿದನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ, ಸಂಘ ಮತ್ತು ಹಿಂದೂ ಸಂಘಟನೆಗಳನ್ನು ಧಮನಿಸುವ ಸಂಚು ಇದಾಗಿದ್ದು, ಸಿದ್ದರಾಮಯ್ಯ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಸುಳ್ಳು ಕೇಸು ದಾಖಲಿಸಿದ್ದಾರೆ, ಡಾ ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಹಾಕಿರುವ ಕೇಸನ್ನು ವಾಪಸುಪಡೆಯಬೇಕೆಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಆಗ್ರಹಿಸಿದ್ದಾರೆ.