ಜ.14 ರಿಂದ ರಾಹುಲ್ ಗಾಂಧಿ ಸಾರಥ್ಯದಲ್ಲಿ ಮಣಿಪುರದಿಂದ-ಮುಂಬೈಗೆ ‘ಭಾರತ್​ ನ್ಯಾಯ ಯಾತ್ರೆ’

ನವದೆಹಲಿ: ಲೋಕಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್​, ಸಂಸದ ರಾಹುಲ್​ ಗಾಂಧಿ ಅವರ ಭಾರತ್​ ಜೋಡೋ ಯಾತ್ರೆಯ ಮುಂದುವರಿದ ಭಾಗ ಎಂಬಂತೆ ಜನವರಿ 14 ರಿಂದ ಮಾರ್ಚ್ 20 ರವರೆಗೆ ಮಣಿಪುರದಿಂದ ಮುಂಬೈಗೆ ‘ಭಾರತ್ ನ್ಯಾಯ ಯಾತ್ರೆ’ ನಡೆಸಲು ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು, ಕಾಂಗ್ರೆಸ್​ ದೇಶಾದ್ಯಂತ ಸಂಘಟನೆ ನಡೆಸುತ್ತಿದೆ. ಮಣಿಪುರದಲ್ಲಾದ ಸಂಷರ್ಘ ಮತ್ತು ಪ್ರಾಣ ಹಾನಿಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಭಾರತ್​ ನ್ಯಾಯ ಯಾತ್ರೆ ನಡೆಸಲಾಗುವುದು. ಇದರಲ್ಲಿ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜ.14ರಿಂದ ಮಾರ್ಚ್ 20ರವರೆಗೆ ಮಣಿಪುರದಿಂದ ಮುಂಬೈವರೆಗೆ ಭಾರತ್ ನ್ಯಾಯ ಯಾತ್ರೆ ನಡೆಸಲು ಎಐಸಿಸಿ ನಿರ್ಧರಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸುದ್ದಿಗೋಷ್ಠಿ ವೇಳೆ ಅಧಿಕೃತವಾಗಿ ಪ್ರಕಟಿಸಿದರು. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಿಂದ ಉತ್ತಮ ಅನುಭವವಾಗಿದೆ, ಮುಂದಿನ ಯಾತ್ರೆಗೆ ಇದು ದಾರಿ ದೀಪವಾಗಿದೆ. ಭಾರತ ನ್ಯಾಯ ಯಾತ್ರೆ ವೇಳೆ, ಯುವಕರು, ಮಹಿಳೆಯರು ಮತ್ತು ಅಂಚಿನಲ್ಲಿರುವ ಜನರೊಂದಿಗೆ ಸಂವಾದ ನಡೆಸಲಿದೆ. ಹೊಸ ಯಾತ್ರೆಯು 6,200 ಕಿ.ಮೀ. ದೂರ ಕ್ರಮಿಸಲಿದೆ.

ಮಣಿಪುರ, ನಾಗಾಲ್ಯಾಂಡ್, ಅಸ್ಸೋಂ, ಮೇಘಾಲಯ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಯುಪಿ, ಎಂಪಿ, ರಾಜಸ್ಥಾನ, ಗುಜರಾತ್ ಮತ್ತು ಅಂತಿಮವಾಗಿ ಮಹಾರಾಷ್ಟ್ರ ಸೇರಿದಂತೆ ಇನ್ನಿತರ ರಾಜ್ಯಗಳನ್ನು ಪ್ರಯಾಣಿಸುತ್ತದೆ. ಈ ಯಾತ್ರೆ ಬಸ್ ಮೂಲಕ ಈ ಬಾರಿಯ ಯಾತ್ರೆ ನಡೆಯಲಿದೆ ಎಂದು  ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಜ.14 ರಂದು ಮಣಿಪುರದಿಂದ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!