ಉಡುಪಿ: ಜಿಲ್ಲೆಯ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕ ಹಾಗೂ ಮಾಲಕರ ಕುಂದುಕೊರತೆ ಸಭೆ
December 27, 2023
ಉಡುಪಿ, ಡಿ.27: ಜಿಲ್ಲೆಯ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕ ಹಾಗೂ ಮಾಲಕರ ಕುಂದುಕೊರತೆ ಆಲಿಸುವ ಸಭೆಯು ಡಿಸೆಂಬರ್ 30 ರಂದು ಮಧ್ಯಾಹ್ನ 4 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.