ನಾಯಕತ್ವ- ಸಂವಹನ ಕೌಶಲ್ಯದ ಕುರಿತು ಕಾರ್ಯಾಗಾರ
ಉಡುಪಿ: ಉಡುಪಿ ಅಜ್ಜರಕಾಜಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಸ್ನಾತಕೋತ್ತರ ವಿಭಾಗದ ವತಿಯಿಂದ ನಾಯಕತ್ವ ಹಾಗೂ ಸಂವಹನ ಕೌಶಲ್ಯದ ಕುರಿತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿಯರಿಗೆ ತರಬೇತಿಯು ಕಾಲೇಜಿನ ಸ್ನಾತಕೋತ್ತರ ವಿಭಾಗದ ಎ.ವಿ. ಹಾಲ್‌ನಲ್ಲಿ ಇತ್ತೀಚೆಗೆ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಜೆಸಿಐಯ ರಾಷ್ಟ್ರೀಯ ಮಟ್ಟದ ತರಬೇತಿದಾರ ಸದಾನಂದ ನಾವಡ ವಿದಾರ್ಥಿಗಳಿಗೆ ತರಬೇತಿ ನೀಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಭಾಸ್ಕರ್ ಶೆಟ್ಟಿ ಎಸ್. ವಹಿಸಿದ್ದರು.
ಕಾಲೇಜಿನ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಪ್ರೊ. ಶ್ರೀಧರ್ ಪ್ರಸಾದ್ ಕೆ. ಸ್ವಾಗತಿಸಿದರು. ಡಾ.ಅಬ್ದುಲ್ ರಝಾಕ್ ವಂದಿಸಿದರು. ವಿದ್ಯಾರ್ಥಿನಿ ಪ್ರಜ್ಞಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.