ಡಾ.ನಿಟ್ಟೆ ಶಂಕರ ಅಡ್ಯಂತಾಯ ಕಾಲೇಜು: ಡಿ.30 ಪುನರ್ಮಿಲನ ಕಾರ್ಯಕ್ರಮ
ಕಾರ್ಕಳ: ಡಾ.ನಿಟ್ಟೆ ಶಂಕರ ಅಡ್ಯಂತಾಯ ಪ್ರಥಮ ದರ್ಜೆ ಕಾಲೇಜು ಹಾಗೂ ಇಲ್ಲಿನ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ವಿಶ್ವ ಹಿರಿಯ ವಿದ್ಯಾರ್ಥಿಗಳ ಸಭೆ ಹಾಗೂ 1996-1998ರ ಅವಧಿಯಲ್ಲಿ ಶಿಕ್ಷಣ ಪೂರೈಸಿರುವ ಸಂಸ್ಥೆಯ ವಿದ್ಯಾರ್ಥಿಗಳ ಬೆಳ್ಳಿ ಪುನರ್ಮಿಲನ ಕಾರ್ಯಕ್ರಮ ಡಿ. 30 ರಂದು ಪೂರ್ವಾಹ್ನ 10ಗಂಟೆಗೆ ಸರಿಯಾಗಿ ಜಸ್ಟೀಸ್ ಕೆ. ಎಸ್. ಹೆಗ್ಡೆ ಉದ್ಯಮಾಡಳಿತ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿರುವ ಉಪನ್ಯಾಸಕರು, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿಶ್ವದೆಲ್ಲೆಡೆ ನೆಲೆಸಿರುವ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸಮಾರಂಭದ ಬಳಿಕ ಹಿರಿಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ಸ್ನೇಹ ಮಿಲನ, ಸಾಂಸ್ಕೃತಿಕ ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ.ವೀಣಾ ಬಿ.ಕೆ ರವರು ತಿಳಿಸಿರುತ್ತಾರೆ.