ಕರವೇ ಕಾರ್ಯಕರ್ತರ ಬಂಧನ- ಉಡುಪಿಯಲ್ಲಿ ಪ್ರತಿಭಟನೆ
ಉಡುಪಿ: ಕಡ್ಡಾಯ ಕನ್ನಡ ನಾಮಫಲಕ ಅಭಿಯಾನದ ನೇತೃತ್ವವಹಿಸಿ ಬೃಹತ್ ಪ್ರತಿಭಟನಾ ಜಾಗೃತಿ ಹೋರಾಟ ಹಮ್ಮಿಕೊಂಡಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ಅಕ್ರಮವಾಗಿ ಬಂಧಿಸಿ ಅಗೌರವದಿಂದ ನಡೆಸಿಕೊಂಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ತಕ್ಷಣ ಜಾಮೀನಿನ ಮೇಲೆ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಕರವೇ ಉಡುಪಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಗೀತಾ ಪಾಂಗಾಳ, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಲಾಲ್, ಜಿಲ್ಲಾ ಕಾರ್ಯದರ್ಶಿ ಸಿದ್ದಣ್ಣ ಎಸ್ ಪೂಜಾರಿ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿ ಎಸ್ ಕೃಷ್ಣಕುಮಾರ್ ಉಪಸ್ಥಿತರಿದ್ದರು.