ನೇಜಾರು ನಾಲ್ವರ ಹತ್ಯೆ ಪ್ರಕರಣ: ಡಿ.30ರಂದು ಆರೋಪಿಯ ಜಾಮೀನು ಅರ್ಜಿ ಅಂತಿಮ ಆದೇಶ
ಉಡುಪಿ, ಡಿ.29: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿ ಕುರಿತು ವಾದ ಪ್ರತಿವಾದ ಮಂಡನೆ ಇಂದು ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು.
ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಆರೋಪಿ ಪರವಾಗಿ ವಕೀಲ ಕೆ.ಎಸ್.ಎನ್.ರಾಜೇಶ್ ವಾದ ಮಂಡಿಸಿದರು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ, ಅರ್ಜಿ ಕುರಿತ ಅಂತಿಮ ಆದೇಶವನ್ನು ಡಿ.30ಕ್ಕೆ ನಿಗದಿಪಡಿಸಿ ಆದೇಶಿಸಿದರು.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14ರಂದು ಅರ್ಜಿಯನ್ನು ಸಲ್ಲಿಸಿದ್ದನು. ಇದಕ್ಕೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು.