ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು: ಇಂದಿನಿಂದ ವಾರದ ಆರು ದಿನ ಸಂಚಾರ ಪ್ರಾರಂಭ
ಉಡುಪಿ, ಡಿ.31: ಕರಾವಳಿಗರ ಬಹುದಿನದ ಕನಸಾಗಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಇಂದಿನಿಂದ ತನ್ನ ಮಂಗಳೂರು ಸೆಂಟ್ರಲ್ ಹಾಗೂ ಮಡಗಾಂವ್ ಜಂಕ್ಷನ್ ನಡುವೆ ಸಂಚಾರವನ್ನು ಪ್ರಾರಂಭಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ರೈಲು ನಂ.20646 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ರೈಲು ಗುರುವಾರ ಹೊರತು ಪಡಿಸಿ ವಾರದ ಉಳಿದ ಆರು ದಿನಗಳಲ್ಲಿ ಬೆಳಗ್ಗೆ 8:30ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಪ್ರಯಾಣ ಬೆಳೆಸಲಿದ್ದು, ಅಪರಾಹ್ನ 1:15ಕ್ಕೆ ಮಡಗಾಂವ್ ಜಂಕ್ಷನ್ ತಲುಪಲಿದೆ.
ಈ ರೈಲು ಉಡುಪಿ ಮತ್ತು ಕಾರವಾರಗಳಲ್ಲಿ ಮಾತ್ರ ನಿಲುಗಡೆ ಇರುತ್ತದೆ. ಸಂಪೂರ್ಣ ಹವಾನಿಯಂತ್ರಿತವಾದ ಈ ರೈಲು ಎಂಟು ಕೋಚ್‌ಗಳನ್ನು ಹೊಂದಿರುತ್ತದೆ.