ಡೆತ್ ನೋಟ್ ಬರೆದು ಶಿಕ್ಷಣ ಇಲಾಖೆಯ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ವ್ಯವಸ್ಥಾಪಕ
ಚಿಕ್ಕಮಗಳೂರು: ಕೆಲಸದ ಒತ್ತಡದಿಂದ ಶಿಕ್ಷಣ ಇಲಾಖೆಯ ವ್ಯವಸ್ಥಾಪಕರೊಬ್ಬರು ಡೆತ್ ನೋಟ್ ಬರೆದು ತಮ್ಮ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ.
ವ್ಯವಸ್ಥಾಪಕ ನಿಂಗನಾಯಕ್ (57) ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡವರು.
ಕಡೂರು ಮೂಲದ ಮೃತ ನಿಂಗನಾಯಕ್ ಅವರು ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿತ್ತು ಹಾಗೂ ಡಿ ದರ್ಜೆ ನೌಕರರು ಕಡಿಮೆ ಇದ್ದಾರೆ. ಎಲ್ಲಾ ಕೆಲಸ ಸಮಯಕ್ಕೆ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ಮನೆಯಲ್ಲಿ ನಿದ್ದೆ ಬರುತ್ತಿರಲಿಲ್ಲ ಎಂದು ಡೆತ್ ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ.