ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ. ಶಾರದಾ ಭಟ್ ಇನ್ನಿಲ್ಲ

ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ (75) ಅವರು ಅಲ್ಪಕಾಲದ ಅಸೌಖ್ಯದಲ್ಲಿದ್ದ ಇವರು ಕಳೆದ ರಾತ್ರಿ ಕೋಟೇಶ್ವರದ ಡಾಕ್ಟರ್ ಎನ್ ಆರ್ ಆಚಾರ್ಯ ಸ್ಮಾರಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಇವರು ಪಯಣ, ಪಲಾಯನ, ಪರಿಭ್ರಮಣ, ಪದರಗಳು, ಕಾದಂಬರಿಗಳು, ಸಾತತ್ತೆಗೊಂದು ಸನ್ಮಾನ, ಸೆಕ್ರೆಟರ ಸಾಹೇಬರ ಹೆಂಡತಿ ಮತ್ತು ಇತರ ಕಥೆಗಳು ಹಾಗೂ ಅಸ್ತಮಾ ಕೊಂಕಣಿ ಕಾದಂಬರಿ ಸೇರಿದಂತೆ ಒಟ್ಟು ಇಪ್ಪತ್ತಕ್ಕೂ ಹೆಚ್ಚು ಕೃತಿ ಬರೆದಿದ್ದಾರೆ.

ಇವರು ಅತ್ಯುತ್ತಮ ಸಂಘಟಕರು, ಅಂಕಣ ಬರೆಹಗಾರರಾಗಿದ್ದರು. ಹತ್ತು ವರ್ಷಗಳ ಕಾಲ ಚಡಗ ಕಾದಂಬರಿ ಪ್ರಶಸ್ತಿ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು. ಸಾಹಿತ್ಯ, ಸಂಘಟನೆ, ಪತ್ರಿಕೋದ್ಯಮ ಈ ಕ್ಷೇತ್ರದಲ್ಲಿ ಇವರ ಸೇವೆ ಅನನ್ಯವಾದುದು.

ಇವರ ನಿಧನ ಸಾಂಸ್ಕೃತಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವೆಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,ಹಾಗೂ ಡಾ.ಎನ್. ಭಾಸ್ಕರಾಚಾರ್ಯರು, ಲೇಖಕ ಪ್ರಕಾಶಕರು ಅತೀವ ಶೋಕ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!