ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ “ವಿಶ್ವಪ್ರಭಾ ಪುರಸ್ಕಾರ- 2024”
ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2024 ‘ನ್ನು ಕನ್ನಡದ ಪ್ರಸಿದ್ಧ ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ನೀಡಿ ಪುರಸ್ಕರಿಸಲಾಗುವುದು.
ಈ ಪುರಸ್ಕಾರವು ಪ್ರಶಸ್ತಿ ಪತ್ರ , ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ.
ಇದೇ ಬರುವ ಜನವರಿ ತಿಂಗಳ 24 ರಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ವಿಶ್ವಪ್ರಭಾ ಪುರಸ್ಕಾರ ಸಮಿತಿಯ ಸಂಚಾಲಕ ಮರವಂತೆ ನಾಗರಾಜ ಹೆಬ್ಬಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.