ಹೆಬ್ರಿ: ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ 18 ಲಕ್ಷ ರೂ. ವಂಚನೆ
ಉಡುಪಿ, ಜ.4: ಹಣ ಹೂಡಿಕೆಯಿಂದ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿಯ ರಾಘವೇಂದ್ರ(41) ಎಂಬವರಿಗೆ ವಾಟ್ಸಾಪ್ಗೆ ಅಪರಿಚಿತ ವ್ಯಕ್ತಿ ಮೊಬೈಲ್ ಸಂದೇಶವೊಂದು ಕಳುಹಿಸಿ, ತಮ್ಮ ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಬರುವುದಾಗಿ ತಿಳಿಸಿದ್ದರು. ಇದನ್ನು ನಂಬಿದ ರಾಘವೇಂದ್ರ, ಆರೋಪಿ ಸೂಚಿಸಿದ ಬ್ಯಾಂಕ್ ಖಾತೆಗೆ ಜ.3ರಂದು ಒಟ್ಟು 18,13,145.90ರೂ. ಹಣವನ್ನು ಆನ್ಲೈನ್ ಮೂಲಕ ವರ್ಗಾಯಿಸಿದ್ದರು. ಆದರೆ ಆರೋಪಿಗಳು ಯಾವುದೇ ಲಾಭಾಂಶವನ್ನು ಈವರೆಗೂ ನೀಡದ ಮೋಸ ಮಾಡಿರುವುದಾಗಿ ದೂರಲಾಗಿದೆ.