‘ನಮ್ಮ ಸರ್ಕಾರವನ್ನು ಆಯ್ಕೆ ಮಾಡಿರುವವರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ’- ಪರಮೇಶ್ವರ್

ಬೆಂಗಳೂರು, ಜ 05: ನಮ್ಮ ಸರ್ಕಾರವನ್ನು ಜನ ಆರಿಸಿದ್ದು, ನಮ್ಮನ್ನ ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಹೇಳುವುದಕ್ಕೂ ಒಂದು ಮಿತಿ ಇರಬೇಕು. ಇಂತಹ ವಿಷಯಗಳಲ್ಲಿ ನಾವು ನ್ಯಾಯವಾಗಿ ಹೋಗಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಇನ್ನು ದತ್ತಪೀಠ ಹೋರಾಟಗಾರರ ವಿರುದ್ಧದ ಪ್ರಕರಣವನ್ನು ರೀ ಓಪನ್ ಮಾಡಿ ಕ್ರಮಕ್ಕೆ ಮುಂದಾದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಕೇಸ್ ರೀ ಓಪನ್ ಮಾಡಿಲ್ಲ. ಪೊಲೀಸ್ ಠಾಣೆಯಲ್ಲಿ ಇರುವ ಪ್ರಕರಣಗಳ ವಿರುದ್ಧ ಅಧಿಕಾರಿ ಕ್ರಮ ತೆಗೆದುಕೊಳ್ಳಲು ಹೋದರೆ ರೀ ಓಪನ್ ಮಾಡಿದ್ದೀರಾ ಅಂತ ಕೇಳಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!