ಉಡುಪಿ: ಡಾ.ಆರತಿ ಕೃಷ್ಣ ಜಿಲ್ಲಾ ಪ್ರವಾಸ- ಕಾಂಗ್ರೆಸ್ ಮುಖಂಡರಿಂದ ಸ್ವಾಗತ
ಉಡುಪಿ: ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಇದರ ಉಪಾಧ್ಯಕ್ಷೆಯಾದ ಡಾ.ಆರತಿ ಕೃಷ್ಣ ವರು ಉಡುಪಿ ಜಿಲ್ಲೆಗೆ ಪ್ರವಾಸ ಸಂದರ್ಭದಲ್ಲಿ ಉಡುಪಿ ಸರ್ಕ್ಯೂಟ್ ಹೌಸ್ ನಲ್ಲಿ N R I ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶೇಖ್ ವಾಹಿದ್ ಅವರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹಾಗೂ ಮುಖಂಡರಾದ ಪ್ರಸಾದ್ ರಾಜ ಕಾಂಚನ್ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಉಡುಪಿಯ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸದಸ್ಯರು ವಿವಿಧ ಘಟಕ ಅಧ್ಯಕ್ಷರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.